ಕುಶಾಲನಗರ, ಜ 11: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಕಾಫಿ ಮತ್ತು ಕಾಳು ಮೆಣಸು ಬೆಳೆಗಾರರು ಕಾಫಿ & ಕಾಳು ಮೆಣಸು ಫಸಲನ್ನು ಕೊಯ್ದು ಮಾಡುವ ಕಾಲವಾಗಿರುತ್ತದೆ. ಕೊಯ್ದು ಮಾಡಿರುವ ಕಾಫಿ ಮತ್ತು ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿರುತ್ತದೆ.
ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭದಲ್ಲಿ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ) ಯನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದು ಮತ್ತು ಬೆಳೆ ಖರೀದಿ ಸಂದರ್ಭ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದುಕೊಳ್ಳುವುದು ಹಾಗೂ ಸದರಿ ಮಾರಾಟದಾರರ ಕುರಿತು ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸುವುದು.
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ವ್ಯಾಪರಸ್ಥರ ಪರಿಶೀಲನೆ ಸಂದರ್ಭ ಕಾಫಿ ಮತ್ತು ಕಾಳು ಮೆಣಸು ವ್ಯಾಪರಸ್ಥರು ಖರೀದಿದಾರರ ವಿವರವನ್ನು ಸಂಗ್ರಹಿಸದಿರುವುದು ಕಂಡುಬಂದಲ್ಲಿ ಅಂತಹ ವ್ಯಾಪರಸ್ಥರ ಮೇಲೆ Section: 411 IPC ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಸದರಿಯವರಿಗೆ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ.
ವಿಶೇಷ ಸೂಚನೆ:- ಬೆಳೆ ವ್ಯಾಪರ ನಡೆಸುವ ಸಂದರ್ಭ ಮಾರಾಟದಾರರ ಕುರಿತು ಸಂಶಯ ಬಂದಲ್ಲಿ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಿದಲ್ಲಿ ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ಬಹಿರಂಗಪಡಿಸುವುದಿಲ್ಲ.
Back to top button
error: Content is protected !!