ನಿಧನ

ಪಶು ವೈದ್ಯಾಧಿಕಾರಿ ಡಾ.ಶಿವಪ್ಪ‌ಬಾದಾಮಿ ಹೃದಯಾಘಾತದಿಂದ ನಿಧನ

ಕುಶಾಲನಗರ, ಜ 12: : ಕ್ರಿಕೆಟ್ ಪಂದ್ಯ ಆಡಿ ಕುಳಿತಿದ್ದ ಪಶು ವೈದ್ಯ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್ಯರಾದ ಡಾ.ಶಿವಪ್ಪ ಬಾದಾಮಿ (56) ಮೃತ ದುರ್ದೈವಿ. ಪಶು ಇಲಾಖೆಯಿಂದ ಆಯೋಜನೆ ಮಾಡಿದ್ದ ಕ್ರಿಕೆಟ್ ಟೂರ್ನಮೆಂಟ್‌ ಆಯೋಜಿಸಲಾಗಿತ್ತು.. ಇಂದಿನಿಂದ ಎರಡು ದಿನಗಳ ಕಾಲ ನಡೆಯುತ್ತಿದ್ದು, ಶಿವಪ್ಪ ಬಾದಾಮಿ ಎಂಬುವರು ಕ್ರಿಕೆಟ್ ಆಡಿ ಪೋಟೋ ಸೆಷನ್ ನಲ್ಲಿ ಪಾಲ್ಗೊಂಡ ನಂತರ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.

ತಕ್ಷಣ ಇತರೆ ವೈದ್ಯರು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಮೈಸೂರು ವಿಭಾಗ ಮಟ್ಟದ ಪಶುವೈದ್ಯರ ಕ್ರೀಡಾಕೂಟಕ್ಕೆ ಏಳು ಜಿಲ್ಲೆಗಳ 12 ತಂಡಗಳು ಆಗಮಿಸಿದ್ದವು. ಚಿಕ್ಕಮಗಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಎರಡು ದಿನಗಳ ಕ್ರಿಕೆಟ್‌ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ತಂಡದಿಂದ ಶಿವಪ್ಪ ಬಾದಾಮಿ ಇಂದು ನಗರಕ್ಕೆ ಆಗಮಿಸಿದ್ದರು.

ಒಂದು ಪಂದ್ಯ ಉತ್ಸಾಹದಿಂದ ಆಡಿದ ಅವರು ಗ್ರೂಪ್ ಪೋಟೋ ತಗೆಸಿಕೊಳ್ಳುವ ವೇಳೆ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ವೈದ್ಯರ ಸಾವಿನಿಂದ ಕ್ರಿಕೆಟ್ ಟೂರ್ನಮೆಂಟ್ ಸ್ಥಗಿತಗೊಳಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!