ಕುಶಾಲನಗರ, ಜ.13: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ದಿನದ ಮಹತ್ವವನ್ನು ಕುರಿತು ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ವೀಣಾ ವಿಜಯ ಮಾತನಾಡಿ, ಸ್ವಾಮಿ ವಿವೇಕಾನಂದನವರ ಆದರ್ಶ ಮತ್ತು ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು.ಇವರು ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದ ಪ್ರಥಮ ವ್ಯಕ್ತಿಯಾಗಿರುತ್ತಾರೆ, ವಿದ್ಯಾರ್ಥಿಗಳು ಇವರ ಉದಾತ್ತ ವ್ಯಕಿತ್ವ, ಬದುಕಿನ ದಾರಿ, ಜೀವನದಲ್ಲಿ ಉತ್ತಮ ಸಾಧನೆ ಮಾಡಲು ರಾಷ್ಟ್ರದ ಸಮಗ್ರತೆ, ಹಾಗೂ ಏಕತೆಯನ್ನು ಸಾರುವ ಸಂದೇಶಗಳು ವಿದ್ಯಾರ್ಥಿಗಳಿಗೆ ಬಹು ಮುಖ್ಯವಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳು ವಿವೇಕಾನಂದರ ಜೀವನ ಚರಿತ್ರೆಯನ್ನು ಕುರಿತು ಮಾತನಾಡಿದರು. ಸಭೆಯಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Back to top button
error: Content is protected !!