ಟ್ರೆಂಡಿಂಗ್

ಕುಶಾಲನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿ

ಕುಶಾಲನಗರ, ಜ 18 : ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಹನ್ನೆರಡನೇ ಶತಮಾನದ ವಚನ ಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿಯನ್ನು

ಕುಶಾಲನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.

ಶ್ರೀ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ದೇ

ವರ ದಾಸಿಮಯ್ಯ, ಬಸವಣ್ಣ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ ಮೊದಲಾದ ವಚನಕಾರರು ಹನ್ನೆರಡನೇ ಶತಮಾನವನ್ನು ಪಾವನಗೊಳಿಸಿದ ಶ್ರೇಷ್ಠ ಶರಣರು.

ಅಂದಿನ ಸಮಾಜದಲ್ಲಿ ಜನಸಾಮಾನ್ಯರನ್ನು ಮೂಢನಂಬಿಕೆಗಳ ಕಟ್ಟಳೆಗಳಲ್ಲಿ ಬಂಧಿಯಾಗಿಸಿ ಅವರ ಜೀವನವನ್ನು ನರಕವಾಗಿಸಿದಾಗ ಸಿದ್ದರಾಮೇಶ್ವರರಂತಹ ಶರಣರು ವಚನ ಕ್ರಾಂತಿಯನ್ನು ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡುವ ಮೂಲಕ ಜಗಜ್ಯೋತಿಯಾದವರು ಎಂದು ಶರಣರ ಚಳುವಳಿಯನ್ನು ಸ್ಮರಿಸಿದರು.

ಹನ್ನೆರಡನೇ ಶತಮಾನದಲ್ಲಿ ವಚನಕಾರರು ಸಾಮಾಜಿಕ ಆಂದೋಲನವನ್ನು ಹಮ್ಮಿಕೊಳ್ಳದಿದ್ದಲ್ಲಿ ಇಂದು ದೇಶ ಇಷ್ಟೊಂದು ಸುಭಿಕ್ಷವಾಗುತ್ತಿರಲಿಲ್ಲ ಎಂದು ವೆಂಕಟನಾಯಕ್ ಬಣ್ಣಿಸಿದರು.

ಮುಖ್ಯ ಅತಿಥಿಯಾಗಿದ್ದ ಸಾಹಿತಿ ಹಾಗೂ ಚಿಂತಕ ಎಂ.ನಂಜುಂಡಸ್ವಾಮಿ ಮಾತನಾಡಿ, ಕನ್ನಡ ನಾಡನ್ನು ಸಾಂಸ್ಕ್ರತಿಕವಾಗಿ ಶ್ರೀಮಂತವಾಗಿಸಿದ ವಚನ ಸಾಹಿತ್ಯ ವಿಶ್ವಕ್ಕೆ ಆದರ್ಶವಾಗಿದೆ.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನಗಳನ್ನು ಬಾಯಿ ಪಾಟ ಮಾಡುವ ಮೂಲಕ ವಚನಗಳ ಸಾರವರಿತು ಅದರಂತೆ ನಡೆದರೆ ಅವರ ಜೀವನವೇ ಪಾವನವಾಗುತ್ತದೆ ಎಂದರು.

ಕುಶಾಲನಗರ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಬಾಲ್ಯದ ದಿನಗಳಿಂದಲೇ ಶರಣರ ವಚನಗಳನ್ನು ಕಲಿಯುವ ಜೊತೆಗೆ ಉತ್ತಮವಾದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕರೆಕೊಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಹಾರನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎ.ಆರ್.ಮಹದೇವಪ್ಪ ವಿದ್ಯಾರ್ಥಿ ಜೀವನದ ಸಾರ್ಥಕತೆ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿದ್ದೇಗೌಡ, ಉಪನ್ಯಾಸಕ ಲೋಕೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಹೆಚ್.ಎಸ್. ಮಧು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!