ಕುಶಾಲನಗರ, ಜ 22: ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದಿಂದ
ಕುಶಾಲನಗರದಲ್ಲಿ ಆರಂಭಿಸಿರುವ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ನೂತನ ಸಹಕಾರ ಸಂಘವನ್ನು ಉದ್ಘಾಟಿಸಿದರು.
ವಿರಾಜಪೇಟೆ ಅಮ್ಮತ್ತಿಯ ಕನ್ನಡ ಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಸಭಾಂಗಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶುಭ ದಿನದಲ್ಲಿ ಉದ್ಘಾಟನೆಗೊಂಡಿರುವ ಈ ಸಂಘ ಮುಂದಿನ ದಿನಗಳಲ್ಲಿ ಅಭಿವೃದ್ದಿ ಹೊಂದಿ ಹಲವು ಶಾಖೆಗಳನ್ನು ಹೊಂದುವಂತಾಗಲಿ. ಕೊಡಗು ಜಿಲ್ಲೆಯಲ್ಲಿ ಹಲವು ವಿಶೇಷ ಕಾರ್ಯಕ್ರಮಗಳಿಗೆ ಹೆಸರುವಾಸಿಯಾದ ವೀರಶೈವ ಲಿಂಗಾಯತ ಸಮುದಾಯ ಇದೀಗ ಈ ಸಹಕಾರ ಸಂಘ ಸ್ಥಾಪಿಸಿರುವುದು ಶ್ಲಾಘನೀಯ ವಿಚಾರ ಎಂದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರಿ ಸದಾಶಿವ ಸ್ವಾಮೀಜಿ, ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವವರು ಈ ಸಂಘದ ನಿರ್ದೇಶಕರಾಗಿದ್ದಾರೆ. ಈ ಎಲ್ಲರ ಅನುಭವದಿಂದ ಸಮುದಾಯದ ಈ ಸಹಕಾರ ಸಂಘ ಜಿಲ್ಲೆಯ ಇತರೆ ಸಂಘಗಳಂತೆ ಮಾದರಿ ಸಂಘವಾಗಿ ಬೆಳವಣಿಗೆ ಹೊಂದಲಿದೆ. ಹಣ ನಿಂತ ನೀರಾಗಬಾರದು. ಸದಾ ಚಲನೆಯಲ್ಲಿರುವ ಮೂಲಕ ಇತರರಿಗೆ ಸಹಕಾರವಾಗಿವಂತಿರಬೇಕು ಎಂದರು.
ಕೊಡ್ಲಿಪೇಟೆ ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಟಿ.ಎಸ್.ಶಾಂಭಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶನಿವಾರಸಂತೆಯ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮನೆಹಳ್ಳಿ ತಪೋವನದ ಮಹಾಂತ ಶಿವಲಿಂಗ ಸ್ವಾಮೀಜಿ, ಸಂಘದ ನಿರ್ದೇಶಕರೂ ಆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಎಚ್.ವಿ.ಶಿವಪ್ಪ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎನ್.ಆರ್.ನಾರಾಯಣರಾವ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಮೈಸೂರು ಪ್ರಾಂತೀಯ ಅಧಿಕಾರಿ ಶಿವಕುಮಾರ ಬಿರಾದಾರ, ಮೈಸೂರು, ಕೊಡಗು ಜಿಲ್ಲೆಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಜವಾಹರ ಮುಗ್ಗನ್ನವರ, ಸಂಘದ ಉಪಾಧ್ಯಕ್ಷ ಎಚ್.ಪಿ.ಉದಯಕುಮಾರ್ ಸೇರಿದಂತೆ ಸಂಘದ ನಿರ್ದೇಶಕರು, ವೀರಶೈವ ಲಿಂಗಾಯತ ಸಮಾಜದ ಪ್ರಮುಖರಾದ ಮಧುಸೂದನ್, ಮಹದೇವಪ್ಪ ಮತ್ತಿತರರು ಇದ್ದರು.
Back to top button
error: Content is protected !!