ಕುಶಾಲನಗರ, ಜ.26:
ಸಂವಿಧಾನದಲ್ಲಿ ಉಲ್ಲೇಖಿಸಿದ ಅಂಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಹಸಿಲ್ದಾರ್ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರಾದ ಕಿರಣ್ ಜಿ ಗೌರಯ್ಯ ಕರೆ ನೀಡಿದ್ದಾರೆ.
ಅವರು ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮತ್ತು ಸಂದೇಶ ನೀಡಿ ಮಾತನಾಡಿದರು.
ವೇದಿಕೆಗಳು ಕೇವಲ ಭಾಷಣಗಳಿಗೆ ಮೀಸಲಾಗಿರಬಾರದು ಭವ್ಯ ಭಾರತ ರೂಪಿಸುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕಾಗಿದೆ ಎಲ್ಲರಿಗೂ ಸಮಾನ ಶಿಕ್ಷಣ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಮೂಲಕ ರಾಷ್ಟ್ರದ ಅಭಿವೃದ್ಧಿ ಸಾಧ್ಯ, ಯುವ ಪೀಳಿಗೆ ಸಮಾನತೆ ಸಹಿಷ್ಣುತೆ ರೂಡಿಸಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನಗೈದ ಮಹಾ ಚೇತನಗಳ ಬಗ್ಗೆ ಸ್ಮರಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಒಟ್ಟಾಗಿ ಸೇರಿ ಒಗ್ಗಟ್ಟಿನ ಕೊರತೆಯನ್ನು ನೀಗಿಸುವ ಕೆಲಸ ಮತ್ತು ಸ್ವಚ್ಛ ಪರಿಸರ ಉಳಿಸುವುದು ಆ ಮೂಲಕ ಸರ್ವಾಂಗೀಣ ಪ್ರಗತಿಗೆ ತಮ್ಮೆಲ್ಲರ ಪಾತ್ರ ಅಮೂಲ್ಯವಾಗಿದೆ ಎಂದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ ಸಿ ದಯಾನಂದ ಇಂತಹ ಕಾರ್ಯಕ್ರಮಗಳ ಮೂಲಕ ಸಂವಿಧಾನ ರೂಪಗೊಂಡ ದಿನ ನೆನಪಿಸುವ ಅವಕಾಶ ಲಭ್ಯವಾಗುತ್ತದೆ ಎಂದರಲ್ಲದೆ ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ಪೊಲೀಸ್ ನ್‌ಸಿಸಿ ಸೇರಿದಂತೆ ಶಾಲಾ-ಕಾಲೇಜುಗಳ ಸುಮಾರು 16 ತಂಡಗಳಿಂದ ಆಕರ್ಷಕ ಪತಸಂಚಲನ ನಡೆಯಿತು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಅವರು ಪೆರೇಡ್ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷರಾದ ಎಂ ಎನ್ ಕುಮಾರಪ್ಪ, ಉಪಾಧ್ಯಕ್ಷ ಎಚ್ ಜೆ ದೊಡ್ಡಯ್ಯ, ಪುರಸಭೆ ಸದಸ್ಯರು ಜನಪ್ರತಿನಿಧಿಗಳು ಅಧಿಕಾರಿ ಸಿಬ್ಬಂದಿಗಳು ಶಾಲಾ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.
ಕಾರ್ಯಕ್ರಮದಲ್ಲಿ ಪತ್ರಕರ್ತೆ ವನಿತಾ ಚಂದ್ರಮೋಹನ್, ಸಮಾಜ ಸೇವಕಿ ಸಲೀನಾ ಡಿಕುನ್ನ, ಪೌರಕಾರ್ಮಿಕ ರಘು, ಕಲಾವಿದ ಭರಮಣ್ಣ ಬೆಟಗೇರಿ, ಸಮಾಜ ಸೇವಕ ಕೆ ಬಿ ರಾಜು ಅವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಶಾಲಾ ಕಾಲೇಜು ಸಂಘ ಸಂಸ್ಥೆಗಳ ಪ್ರಮುಖರು ರಾಷ್ಟ್ರಗೀತೆ ನಾಡಗೀತೆ ರೈತ ಗೀತೆ ಹಾಡಿದರು. ಮಹೇಶ್ ಅಮೀನ್ ಅವರು ಒಂದೇ ಮಾತರಂ ಗೀತೆ ಹಾಡಿದರು.
ಶಾಲಾ ಕಾಲೇಜು ತಂಡಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Back to top button
error: Content is protected !!