ಟ್ರೆಂಡಿಂಗ್

ಮುಳ್ಳುಸೋಗೆ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ, ವಾರ್ಷಿಕೋತ್ಸವ

ಕುಶಾಲನಗರ, ಜ 27: ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ಕಾವಲು ಪಡೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ. ಕೃಷ್ಣ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಸರ್ಕಾರಿ ಶಾಲೆ ಉಳಿಸಿ ಬೆಳೆಸಲು ಗ್ರಾಮದ ಜನರು ಹಾಗೂ ದಾನಿಗಳು ಕೈ ಜೋಡಿಸಬೇಕೆಂದು ಕರೆ ನೀಡಿದರು.
ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕ್ಷೀಣಿಸುತ್ತಿದ್ದು ಮುಳ್ಳುಸೋಗೆ ಶಾಲೆಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸುವಂತೆ ಕಾವಲುಪಡೆ‌ ಕೃಷ್ಣ ಅವರ ಮನವಿಗೆ ಸ್ಪಂದಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮವಹಿಸುವ ಭರವಸೆ ನೀಡಿದರು.
ನಂತರ ವಿಧ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಆಟೋಟ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಂಡು ವಿಜೇತರಿಗೆ ಬಹಮಾನ ನೀಡಲಾಯಿತು.
ಸಂಜೆ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸಹ ಶಿಕ್ಷಕಿ ರಾಗಿಣಿ, ಮೇರಿ ಮಾರ್ಗರೇಟ್ ಸೇರಿದಂತೆ ಶಿಕ್ಷಕ‌ ವೃಂದದವರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!