ಕುಶಾಲನಗರ, ಜ. 31: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶನೇಶ್ವರ ದೇವಾಲಯಕ್ಕೆ ಮೈಸೂರು ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿ ದೇವಾಲಯದ ಧರ್ಮದರ್ಶಿ ಯಲಮ್ಮಬಾಯಿ ಅವರ ಕುಶಲೋಪರಿಯನ್ನು ವಿಚಾರಣೆ ಮಾಡಿದರು.
ಈ ಸಂದರ್ಭದಲ್ಲಿ ದೇವಾಲಯದ ಭಕ್ತರ ವತಿಯಿಂದ ಸುತ್ತೂರು ಮಠದ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಗಳಿಗೆ ಫಲತಂಬೂಲ ನೀಡಿ ಪಾದಪೂಜೆ ನೆರವೇರಿಸಲಾಯಿತು.
ಈ ಸಂದರ್ಭ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ, ಜಿ.ಪಂ.
ನ ಶಿಕ್ಷಣ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಅರುಣ್ ರಾವ್, ಸುನಿಲ್ ರಾವ್, ಸೇರಿದಂತೆ ದೇವಾಲಯದ ಅರ್ಚಕ ವೃಂದದವರು ಹಾಜರಿದ್ದರು.
Back to top button
error: Content is protected !!