ಕುಶಾಲನಗರ, ಫೆ 06: ಮಡಿಕೇರಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರನ್ನು ಭೇಟಿ ಮಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಗ್ರಾಮ ಪಂಚಾಯಿತಿಯ ಹಲವು ಸಮಸ್ಯೆಗಳ ಕುರಿತು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಭಾಸ್ಕರ್ ನಾಯಕ್, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಮಾಡಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆಯಲಾಯಿತು. ಗ್ರಾಮ ಪಂಚಾಯಿತಿ ಕಟ್ಟಡಕ್ಕಾಗಿ ಮೀಸಲಿಟ್ಟಿರುವ ಕೃಷಿ ಇಲಾಖೆ ಜಾಗಕ್ಕೆ ಸಂಬಂಧಿಸಿದಂತೆ ಕಡತಗಳ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದರು.
Back to top button
error: Content is protected !!