ಕುಶಾಲನಗರ, ಫೆ 06: ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ದಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.
ಹೆಚ್.ಆರ್.ಪಿ.ಕಾಲೋನಿಯಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಅಂಗನವಾಡಿಯಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದರ ಮೂಲಕ ಅವರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಲಾಗುತ್ತದೆ. ಅಂಗನವಾಡಿಯ ಕಾರ್ಯಕರ್ತರ ಪರಿಶ್ರಮದಿಂದ ಮಕ್ಕಳು ಶಿಸ್ತು, ಸಂಯಮ, ನೀತಿಯ ಜೊತೆಗೆ ಬೆಳವಣಿಗೆ ಹೊಂದುತ್ತಾರೆ. ಮಕ್ಕಳಿಗೆ ಉತ್ತಮ ವಾತಾವರಣ ಮುಖ್ಯ. ಪ್ರತಿ ಅಂಶಗಳು ಕೂಡ ಅವರ ಮನಸ್ಸಿನ ಮೇಲೆ ಪರಿಣಾಮ ಬೀರುವುದರಿಂದ ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿ ಕೂಡ ಮುಖ್ಯ ಎಂದರು.
ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ ಮಾತನಾಡಿ, ಪ್ರಾಥಮಿಕ ಪೂರ್ವ ಶಿಕ್ಷಣ ಶೈಕ್ಷಣಿಕ ಜೀವನದ ಬುನಾದಿ. ಹೀಗಾಗಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಲ್ಲಿ ದೈಹಿಕ, ಶಾರೀರಿಕ ಚೈತನ್ಯಶೀಲತೆ ಉಂಟುಮಾಡುವ ಕೆಲಸವಾಗಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೇಲ್ವಿಚಾರಕಿ ಸಾವಿತ್ರಿ ಮಾತನಾಡಿದರು.
ಬಾಲ ವಿಕಾಶ ಸಮಿತಿಯ ಅಧ್ಯಕ್ಷೆ ನಯನ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಪುರಸಭೆ ಸದಸ್ಯರಾದ ಸುಂದರೇಶ್, ಶೈಲಾ ಕೃಷ್ಣಪ್ಪ, ಜಯಲಕ್ಷ್ಮಿ ನಂಜುಂಡಸ್ವಾಮಿ, ಎಂ.ಬಿ.ಸುರೇಶ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗಂಡುರಾವ್,
ರೋಟರಿ ಕ್ಲಬ್ ಅಧ್ಯಕ್ಷೆ ಸುನಿತಾ ಮಹೇಶ್, ಮಾಜಿ ಅಧ್ಯಕ್ಷ ಮಹೇಶ್, ಪ್ರಮುಖರಾದ ಆರತಿ ಎ.ಶೆಟ್ಟಿ, ರವೀಂದ್ರ ರೈ, ಅಂಗನವಾಡಿ ಕೇಂದ್ರದ ಶಿಕ್ಷಕಿ ಸುಚಿತ್ರಾ, ಸಹಾಯಕಿ ಮಂಜುಳಾ ಸೇರಿದಂತೆ ಕೂಡಿಗೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಕಾಂಗ್ರೆಸ್ ಪ್ರಮುಖರಾದ ರಂಜನ್, ವಿ.ಜೆ.ನವೀನ್, ಪ್ರಕಾಶ್ ಸೇರಿದಂತೆ ಪೋಷಕರು ಹಾಜರಿದ್ದರು.
Back to top button
error: Content is protected !!