ಕುಶಾಲನಗರ, ಜೂ 26: ಕುಶಾಲನಗರ ಪುರಸಭಾ ವ್ಯಾಪ್ತಿಯ ವಿವಿಧೆಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ ಭೇಟಿ ನೀಡಿ ಪರಿಶೀಲಿಸಿದರು.
ಕುಶಾಲನಗರ ಕಾವೇರಿ ಸೇತುವೆ ಬಳಿ ಕಾವೇರಿ ನದಿ ವೀಕ್ಷಿಸಿದ ಸಚಿವರು, ಟೌನ್ ಕಾಲನಿಯಲ್ಲಿ ಮಳೆಯಿಂದ ಹಾನಿಯಾದ ಜಯಪ್ರಕಾಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೊತೆಯಲ್ಲಿದ್ದ ಶಾಸಕ ಡಾ.ಮಂತರ್ ಗೌಡ ಅವರು ಸಚಿವರಿಗೆ ಮಾಹಿತಿ ಒದಗಿಸಿದರು. ಇದೇ ಸಂದರ್ಭ ಕುಶಾಲನಗರ ಪುರಸಭಾ ನೂತನ ಸಭಾಂಗಣಕ್ಕೆ ಭೇಟಿ ನೀಡಿದ ಸಚಿವರಿಗೆ ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು, ಕುಶಾಲನಗರದ ಪುರಸಭೆ ಕಟ್ಟಡ ಅತ್ಯಂತ ಸುಸಜ್ಜಿತವಾಗಿದೆ ಎಂದು ಶ್ಲಾಘಿಸಿದರು. ಸಮರ್ಪಕ ಆಡಳಿತ ವ್ಯವಸ್ಥೆಗೆ ಈ ಕಟ್ಟಡ ಪೂರಕವಾಗಿದೆ. ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಹೆಚ್ಚಿನ ಅನುಕೂಲಕರವಾಗಿದೆ ಎಂದರು. ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಿದೆ. ಸಾರ್ವಜನಿಕರ ಕೆಲಸ ಕಾರ್ಯ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕಿದೆ. ಆಡಳಿತ ವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೆಗಳುವಂತಹ ಕಾರ್ಯಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು. ಪುರಸಭೆಗೆ ಆದಾಯ ಉಂಟುಮಾಡುವ ಮಳಿಗೆಗಳನ್ನು ಆದಷ್ಟು ಬೇಗ ಹರಾಜು ಮಾಡುವ ಪ್ರಕ್ರಿಯೆ ನಡೆಸಬೇಕಿದೆ ಎಂದರು. ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲು ಸಚಿವರ ಬಳಿ ಮನವಿ ಮಾಡಿಕೊಂಡರು. ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ರಂಗಸಮುದ್ರ ಕೂಪ್ ಹಾಡಿಗೆ ತೆರಳುವ ಮಾರ್ಗದಲ್ಲಿ ಚಿಕ್ಲಿಹೊಳೆ ಮುಖ್ಯನಾಲೆ ಕಿರುಸೇತುವೆ ಒಂದು ಭಾಗ ಕುಸಿದಿರುವ ತಡೆಗೋಡೆ ವೀಕ್ಷಣೆ ನಡೆಸಲಾಯಿತು. ಸುರಕ್ಷತೆ ದೃಷ್ಠಿಯಿಂದ ಕೂಡಲೆ ಸಾಂಡ್ ಬಂಡ್ ಹಾಗೂ ಮೆಸ್ ಅಳವಡಿಸಲು ಶಾಸಕರು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಾಲೂಕು ಗ್ಯಾರೆಂಟ್ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಲ್ಲಾಧಿಕಾರಿ ವೆಂಕಟ್ ರಾಜ, ಎಸ್ಪಿ ರಾಮರಾಜನ್, ತಹಸೀಲ್ದಾರ್ ಕಿರಣ್ ಗೌರಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಮಂಜುನಾಥ್ ಗುಂಡುರಾವ್, ಸೇರಿದಂತೆ ಕಾಂಗ್ರೆಸ್ ಮುಖಂಡರು, ಪುರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಇದ್ದರು.
Back to top button
error: Content is protected !!