ಆರೋಪ

ನಂಜರಾಯಪಟ್ಟಣ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಗೆ ನೋಂದಣಿ: ಅಭಿವೃದ್ದಿ ಕುಂಠಿತ

ಕುಶಾಲನಗರ ಜೂ. 06: ನಂಜರಾಯಪಟ್ಟಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಅರಣ್ಯ ಇಲಾಖೆಯ ಹೆಸರಿನಲ್ಲಿ ನೊಂದಣಿ ಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆಯಬೇಕಿದ್ದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೊಂಡರೂ ಯಾವುದೇ ಕಾಮಗಾರಿಯನ್ನು ನಡೆಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಡದ ಕಾರಣದಿಂದಾಗಿ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್ ವಿಶ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆವರಿಗೆ ಕಳೆದ 15 ವರ್ಷಗಳ ಹಿಂದೆ ಆರೋಗ್ಯ ಇಲಾಖೆಯ ಜಾಗದಲ್ಲಿ ಕೆಲವು ಹಣ್ಣಿನ ಗಿಡಗಳನ್ನು ನೆಡಲು ಅವಕಾಶ ನೀಡಲಾಗಿತ್ತು. ಆದರೆ ಅದೇ ಜಾಗವು ಇದೀಗ ಅರಣ್ಯ ಇಲಾಖೆಯ ಹೆಸರಿಗೆ ನೊಂದಣಿಯಾಗಿರುವುದು ಕಂಡಬಂದಿದೆ.
ಆರಗ್ಯ ಇಲಾಖೆಯ ಅಧೀನದಲ್ಲಿರುವ ಜಾಗದಲ್ಲಿ ಇಲಾಖೆಯ ಮೂಲಕ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಅಭಿವೃದ್ಧಿ ಮಾಡಬೇಕಾಗಿದೆ. ಆದರೆ ಜಾಗ ದ ನೊಂದಣಿ ವಿಷಯದಿಂದಾಗಿ ಇದುವರೆಗೆ ಯಾವುದೇ ಕಾಮಗಾರಿಯು ನಡೆದಿರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರಿಗೆ ಮತ್ತು ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗ್ರಾಪಂ ಮೂಲಕ ಪತ್ರ ವ್ಯವಹಾರ ನಡೆಸಲಾಗಿದೆ. ಕೂಡಲೆ ಈ ಸಮಸ್ಯೆ ಇತ್ಯರ್ಥಪಡಿಸಿ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಅನುಕೂಲ ಒದಗಿಸುವಂತೆ ಗ್ರಾಪಂ ಆಡಳಿತ ಮಂಡಳಿ ಆಗ್ರಹಿಸಿದೆ. ಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂಂ

Related Articles

Leave a Reply

Your email address will not be published. Required fields are marked *

Back to top button
error: Content is protected !!