ಟ್ರೆಂಡಿಂಗ್

ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ

ಕುಶಾಲನಗರ,ಫೆ 23 : ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಜವಾಬ್ದಾರಿ ದೈಹಿಕ ಶಿಕ್ಷಕರದ್ದಾಗಿದೆ ಎಂದು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ಉಪ ಪ್ರಾಂಶುಪಾಲ ಪರಮೇಶ್ವರಪ್ಪ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ತಾಲ್ಲೂಕು ಸಂಯುಕ್ತಾಶ್ರಯದಲ್ಲಿ ಈಚೆಗೆ ಇಲ್ಲಿನ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ದೇಶ ಪ್ರೇಮ, ವೈಯಕ್ತಿಕ ಸ್ವಚ್ಛತೆ ಸಹಕಾರ ಮನೋಭಾವ, ಭಾವೈಕ್ಯತೆ ಬೆಳೆಸುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವಂತ ಪ್ರಜೆಗಳಾಗಿ ರೂಪಿಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ಕಲಿಕಾ ಚಟುವಟಿಕೆಗಳನ್ನು ಅಭಿವದ್ಧಿಪಡಿಸಿಕೊಳ್ಳಬೇಕಿದೆ. ಜತೆಗೆ ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ಸಮಸ್ಯೆ ಮತ್ತು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿ ಗಳ ಪಾತ್ರ ಪ್ರಮುಖವಾಗಿರುತ್ತದೆ. ಅವರಿಗೆ ದೈಹಿಕ ಮತ್ತು ಮಾನಸಿಕ ಧೈರ್ಯ ತುಂಬುವ ವ್ಯವಸ್ಥೆ ದೈಹಿಕ ಶಿಕ್ಷಣದಿಂದ ಆಗುತ್ತದೆ. ವಿದ್ಯಾರ್ಥಿಗಳ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವೂ ಮುಖ್ಯವಾಗಿರುತ್ತದೆ. ಹೊಸ ಹೊಸ ದೈಹಿಕ ಮೌಲ್ಯಮಾಪನಗಳಿಂದ ತರಬೇತಿ ಪಡೆದು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ಬೆಳವಣಿಗೆಗೆ ಕಾರಣಕರ್ತರಾಗುವುದು ಮುಖ್ಯವಾಗಿರುತ್ತದೆ ಎಂದರು.

ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಗೋವಿಂದೇಗೌಡ ಮಾತನಾಡಿ, ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ದೈಹಿಕ ಶಿಕ್ಷಣ ವಿಷಯವು ಪಠ್ಯಕ್ರಮವಾಗಿ ರೂಪುಗೊಂಡಿದ್ದು, ಪಠ್ಯದಲ್ಲಿನ ಕ್ಲಿಷ್ಟ ವಿಷಯಗಳನ್ನು ನೂತನ ಮೌಲ್ಯಮಾಪನದ ವಿಧಾನದಲ್ಲಿ ಬೋಧಿಸುವ ಸಾಮರ್ಥ್ಯ ಪಡೆಯಲು ಇಂತಹ ಕಾರ್ಯಗಾರಗಳು ಪೂರಕವಾಗಿದೆ ಎಂದರು.

ಈ ಸಂದರ್ಭ ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಲಕ್ಷ್ಮಣ್,ಕಾರ್ಯದರ್ಶಿ ಭೋಜೇಗೌಡ,ಪದವಿಪೂರ್ವ ಕಾಲೇಜಿನ ಗಣಿತ ಶಿಕ್ಷಕ ಎ.ಸಿ ಮಂಜುನಾಥ್, ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಸುಕುಮಾರಿ, ಐಗೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ, ತಾಲ್ಲೂಕು ನೌಕರ ಸಂಘದ ಅಧ್ಯಕ್ಷ ನಾಗೇಶ್,

ಸೋಮವಾರಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಶಿವಶಂಕರ್, ಶಿಕ್ಷಕರಾದ ಮೀರಾ ಮತ್ತು ಶೈಲಾ,ಪಾಲಾಕ್ಷ,ಪ್ರತಾಪ್ ,ಕುಶಲನಗರ ಎ ಮತ್ತು ಬಿ ವಲಯದ ದೈಹಿಕ ಶಿಕ್ಷಣ ಶಿಕ್ಷಕರು ಸೋಮವಾರಪೇಟೆ ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.

ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ಡ್ಯಾನಿ ಈರಪ್ಪ ಅವರು ಹಾಕಿ ಸೇರಿದಂತೆ ವಿವಿಧ ಕ್ರೀಡೆಗಳ ಕುರಿತು ಉಪನ್ಯಾಸ ನೀಡಿದರು.ಇದೇ ಸಂದರ್ಭ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕಿ ಸಿ.ಎಂ. ಸುಲೋಚನಾ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

 

 

 

Related Articles

Leave a Reply

Your email address will not be published. Required fields are marked *

Back to top button
error: Content is protected !!