ಕ್ರೀಡೆ
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ- ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ
ಕುಶಾಲನಗರ ಫೆ 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ ತಾಲೂಕು ಶಾಖೆ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ನೌಕರರು ಕಛೇರಿಯ ಕೆಲಸದ ಒತ್ತಡದ ನಡುವೆಯೂ ಇಂತಹ ಕಾರ್ಯಕ್ರಮಗಳನ್ನು ನಡೆಸಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದರು. ಈಗಾಗಲೇ ರಾಜ್ಯದ ವಿವಿಧ ಇಲಾಖೆಯ ಸಚಿವರೊಂದಿಗೆ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ನೌಕರರ ನೇಮಕಕ್ಕೆ ಸಂಬಂಧಿಸಿದಂತೆ ಗಮನ ಸೆಳೆಯಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಸೋಮವಾರಪೇಟೆ ತಾಲ್ಲೂಕು ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್, ಗೌರವಾಧ್ಯಕ್ಷ ಪ್ರಸನ್ನಕುಮಾರ್, ರಾಜ್ಯ ಪರಿಷತ್ ಸದಸ್ಯ ವಿ.ಎನ್. ಸುಗುಣಾನಂದ, ಖಜಾಂಚಿ ದಿನೇಶ್, ಉಪಾಧ್ಯಕ್ಷ ದಯಾನಂದ ಪ್ರಕಾಶ್, ಕಾರ್ಯದರ್ಶಿ ನಾಗೇಶ್, ಸಂಘಟನಾ ಕಾರ್ಯದರ್ಶಿ ಮಂಜುನಾಥ, ಮಿಲನಭರತ್, ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್,ಲ ಸೇರಿದಂತೆ ಸಂಘದ ನಿರ್ದೇಶಕರು ಹಾಜರಿದ್ದು.
ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಶಾಸಕರು ಪ್ರಮಾಣಪತ್ರ ವಿತರಣೆ ಮಾಡಿದರು.