ಕುಶಾಲನಗರ, ಫೆ 27: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮಶತಮಾನೋತ್ಸವ ಆಚರಣೆ ಫೆ. 28 ರಂದು ಹಾರಂಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಸಂಚಾಲಕ ಲೋಕೇಶ್ ಸಾಗರ್ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿಗಳಾದ ವೀರೇಂದ್ರ ಪಾಟೀಲ್ ಹಾಗೂ ಗುಂಡುರಾಯರ ಕೊಡುಗೆ ಅಪಾರವಿದೆ. ಇಂತಹ ಮಹನೀಯರನ್ನು ಸ್ಮರಿಸಿ ಅವರ ಬಗ್ಗೆ ಇಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕಿದೆ.
ಈ ಹಿನ್ನಲೆಯಲ್ಲಿ ಹಾರಂಗಿ ಜಲಾಶಯ ನಿರ್ಮಾಣಕ್ಕೆ ಕಾರಣಕರ್ತರಾದ ವೀರೇಂದ್ರ ಪಾಟೀಲ್ ಅವರ ಜನ್ಮದಿನದಂದು ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಹಾರಂಗಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ನೀರು ಬಳಕೆದಾರ ಸಂಘಗಳ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವರು ಮನವಿ ಮಾಡಿದರು.
ಮುಂದಿನ ದಿನಗಳಲ್ಲಿ ದಿ.ಗುಂಡುರಾಯರ ಜನ್ಮದಿನದಂದು ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಬಳಗದ ಪ್ರಮುಖರಾದ. ಎಂ.ಡಿ.ರಂಗಸ್ವಾಮಿ, ಕೆ.ಎಸ್.ಕೃಷ್ಣೇಗೌಡ, ಬಿ.ಎ.ನಾಗೇಗೌಡ ಇದ್ದರು.
Back to top button
error: Content is protected !!