ಸುದ್ದಿಗೋಷ್ಠಿ

ಫೆ.29ರಂದು ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಪಡಿತರ ವಿತರಕರ ಸಮಾವೇಶ

ಕುಶಾಲನಗರ: ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಹಾಗೂ ರಾಜ್ಯ ಪಡಿತರ ವಿತರಕರ ಸಮಾವೇಶ ಈ ತಿಂಗಳ 29 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಶಾಲನಗರ ತಾಲೂಕು ಪಡಿತರ ವಿತರಕರ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಆಹಾರ ನಾಗರಿಕ ಸರಬರಾಜು ನಿಗಮವು ಪ್ರಾರಂಭವಾಗಿ 50ರ ವಸಂತದ ಹಂತದಲ್ಲಿ ಸುವರ್ಣ ಮಹೋತ್ಸವ ಆಚರಣೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಪಡಿತರ ವಿತರಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ 29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಜಿಲ್ಲೆಯ ಪಡಿತರ ವಿತರಕರು, ವಿ ಎಸ್ ಎಸ್ ಎನ್ ಕಾರ್ಯದರ್ಶಿಗಳು ,ನ್ಯಾಯಬೆಲೆ ಅಂಗಡಿ ಕಾಡುದಾರರು ಈ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ಕೆ ಎನ್ ಅಶೋಕ್ ತಿಳಿಸಿದ್ದಾರೆ.

ಜಿಲ್ಲೆಯಿಂದ ತೆರಳಲು ಈಗಾಗಲೇ ಬಸ್ ವ್ಯವಸ್ಥೆ ಮಾನ್ಯ ಶಾಸಕ ಡಾ.ಮಂತರ್ ಗೌಡ ಅವರು ಕಲ್ಪಿಸಿ ಕೊಟ್ಟಿರುತ್ತಾರೆ ಎಂದು ಮಾಹಿತಿ ನೀಡಿದ ಅವರು ಹೆಚ್ಚಿನ ಸಂಖ್ಯೆಯಲ್ಲಿ ಪಡಿತರ ವಿತರಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು. ಪಡಿತರ ವಿತರಕರ ಹಲವು ಬೇಡಿಕೆಗಳನ್ನು ಈ ಸಮಾವೇಶದಲ್ಲಿ ಮುಂದಿಡಲಾಗುವುದು ಎಂದು ಹೇಳಿದ ಅಶೋಕ್ , ಪಡಿತರ ವಿತರಕರ ಕಮಿಷನ್ ಏರಿಕೆ ಮಾಡುವುದು, ಇತರೆ ರಾಜ್ಯಗಳಲ್ಲಿ ಹೆಚ್ಚಿನ ಕಮಿಷನ್ ನೀಡುತ್ತಿದ್ದು, ಏಕರೂಪ ಕಮಿಷನ್ ನೀಡುವಂತೆ ಒತ್ತಾಯಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 274 ಪಡಿತರ ವಿತರಕ ಅಂಗಡಿಗಳಿದ್ದು ಪ್ರತಿ ಅಂಗಡಿಗಳಿಂದ ಐದು ಮಂದಿ ಸಮಾವೇಶಕ್ಕೆ ತೆರಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅರುಣಚಂದ್ರ, ಕಾರ್ಯದರ್ಶಿ ವಿನಯ್ ಕುಮಾರ್, ಸಹ ಕಾರ್ಯದರ್ಶಿ ವರದರಾಜ ದಾಸ್ ಮತ್ತು ನಿರ್ದೇಶಕ ಹರೀಶ್ ಕುಮಾರ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!