ಕುಶಾಲನಗರ, ಫೆ.28: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ
ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಶಾಲೆಯ ಸರ್ ಸಿ.ವಿ.ರಾಮನ್ ವಿಜ್ಞಾನ ಸಂಘ, ಇಕೋ ಕ್ಲಬ್ ಹಾಗೂ ಎಸ್.ಡಿ.ಎಂ.ಸಿ.ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: 2024 ಯನ್ನು ಆಚರಿಸಲಾಯಿತು.
ವಿಜ್ಞಾನ ದಿನಾಚರಣೆಯ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಕುರಿತು ಭಾರತೀಯ ಸಂವಿಧಾನದ 51 ( ಎಚ್ ) ವಿಧಿಯ ಮಹತ್ವ ತಿಳಿಸಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತಾದ *ಪ್ರತಿಜ್ಞಾ ವಿಧಿ* ಬೋಧಿಸಿದ
ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿ
ವೈಜ್ಞಾನಿಕ ಮನೋಭಾವನೆ ಮತ್ತು ವೈಚಾರಿಕತೆ ಬೆಳೆಸಿಕೊಂಡು ತರ್ಕಬದ್ಧವಾಗಿ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ, ಕಂದಾಚಾರ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡುವಲ್ಲಿ ವಿದ್ಯಾರ್ಥಿಗಳು ಪಣ ತೊಡಬೇಕು ಎಂದರು.
ನಾವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹೊಂದಲು ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರವಾದುದು ಎಂದು ಪ್ರೇಮಕುಮಾರ್ ತಿಳಿಸಿದರು.
ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ಮಾಹಿತಿ ನೀಡಿದ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ,
ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.
ವಿದ್ಯಾರ್ಥಿ ಕೆ.ಎಂ.
ಮದನ್ , ಸರ್ ಸಿ.ವಿ.ರಾಮನ್ ಅವರ ವೈಜ್ಞಾನಿಕ ಕ್ಷೇತ್ರದ ಸಾಧನೆ ಕುರಿತು ವಿಷಯ ಮಂಡಿಸಿದರು.
ವಿದ್ಯಾರ್ಥಿಗಳು ವಿಜ್ಞಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಕೆ.ಟಿ.ಸೌಮ್ಯ ಮತ್ತು ವಿದ್ಯಾರ್ಥಿಗಳು ಇದ್ದರು.
Back to top button
error: Content is protected !!