ಕುಶಾಲನಗರ, ಮಾ. 5: ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ, ತೊರೆನೂರಿನ ಶ್ರೀ ಶನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ಸಂಯುಕ್ತ ಆಶ್ರಯದಲ್ಲಿ 8.ರಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜೆ, “ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಹಾಗೂ ಜಾನಪದ ಉತ್ಸವ ಕಾರ್ಯಕ್ರಮವು ಶ್ರೀ ಶನೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡಸಿರಿ ಸ್ನೇಹ ಬಳಗ ಬಿ. ಎಸ್. ಲೋಕೇಶ್ ಸಾಗರ್ ತಿಳಿಸಿದ್ದಾರೆ.
ನೃತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನವಾಗಿ 15, 000, ದ್ವಿತೀಯ 10, 000 ಹಾಗೀ ತೃತೀಯ 5,000 ಹಾಗೂ ಸಮಾಧಾನಕರ ಬಹುಮಾನ, ಆಕರ್ಷಕ ಪಾರಿತೋಷಕ, ಭಾಗವಹಿಸಿದ ಎಲ್ಲಾ ತಂಡಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದ ಆವರಣದಲ್ಲಿ ಸಾಮೂಹಿಕ ಮಹಾ ಮೃತ್ಯುಂಜಯ ಹೋಮ, ಸಂಜೆ 7 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರತ್ನ ಪದ್ಮವಿಭೂಷಣ ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ್ ಸ್ವಾಮಿಗಳು, ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮಿ ಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.
ಶನೇಶ್ವರ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣೆಗೌಡ ಮಾತನಾಡಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತೊರೆನೂರು ಸಹಕಾರ ಸಂಘದ ನಿರ್ದೇಶಕ ಟಿ. ಎಸ್ ಜಗದೀಶ್ ಹಾಜರಿದ್ದರು.
Back to top button
error: Content is protected !!