ಕಾರ್ಯಕ್ರಮ

ಹೆಬ್ಬಾಲೆ ಗ್ರಾಮದಲ್ಲಿ ನಡೆದ ಜಾನಪದ ಗ್ರಾಮ ಸಿರಿ ಕಾರ್ಯಕ್ರಮ: ಆಟೋಟ ಸ್ಪರ್ಧೆ

ಕುಶಾಲನಗರ, ಮಾ 05: ಗ್ರಾಮೀಣ ಕ್ರೀಡೆಗಳಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಿ, ಪ್ರೋತ್ಸಾಹ ನೀಡಬೇಕಾದ ಅಗತ್ಯತೆ ಇದೆ ಹೆಬ್ಬಾಲೆ ಗ್ರಾಮದ ನಿವೃತ್ತ ಸೈನಿಕ ಹೆಚ್.ಪಿ.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕಸಾಪ, ಹೆಬ್ಬಾಲೆ ಹೋಬಳಿ ಕಸಾಪ ಘಟಕ ಮತ್ತುಉ ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿಗಳ ನೇತೃತ್ವದಲ್ಲಿ ಹೆಬ್ಬಾಲೆ ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಂಗಳವಾರ ಜಾನಪದ ಗ್ರಾಮ ಸಿರಿ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕ ಯುಗದಲ್ಲಿ ಯುವಜನಾಂಗ ಕೇವಲ ಮೊಬೈಲ್ ಗೇಮ್ ಗಳಲ್ಲಿ ಮಗ್ನರಾಗಿ ದೈಹಿಕವಾಗಿ ಬಹಳ ದುರ್ಬಲರಾಗಿದರೆ. ಸರ್ಕಾರ ಶಿಕ್ಷಣ ಇಲಾಖೆ ಮೂಲಕ ಗ್ರಾಮೀಣ ಕ್ರೀಡೆಗಳ ಬಗ್ಗೆ ಅರಿವು ಮೂಡಿಸಿ ಆಸಕ್ತಿ ಬೆಳೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಗ್ರಾಮ ಸಿರಿ ಆಚರಣಾ ಸಮಿತಿಯ ಆರ್ಥಿಕ ಸಮಿತಿ ಅಧ್ಯಕ್ಷ ಹೆಚ್.ಕೆ.ನಟೇಶ್ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ ಇಂತಹ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತು ಇಂತಹ ಕ್ರೀಡಾಕೂಟ ಆಯೋಜನೆ ಮಾಡಿ ಇಂದಿನ ಯುವ ಪೀಳಿಗೆಯಲ್ಲಿ ಗ್ರಾಮೀಣ ಆಟಗಳ ಬಗ್ಗೆ ಪ್ರೇರೇಪಣೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ತೊರೆನೂರು ಗ್ರಾಮದ ರಾಜ್ಯ ಮಟ್ಟದ ಕ್ರೀಡಾಪಟು ಟಿ.ಹೆಚ್.ಗಣೇಶ್ ಕ್ರೀಡಾ ಜ್ಯೋತಿಯನ್ನು ಬೆಳಗದಿರು.

ನಿವೃತ್ತ ಶಿಕ್ಷಕ ಡಿ.ಪಿ.ವೀರಭದ್ರಪ್ಪ, ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಕುಮಾರಿ, ಸದಸ್ಯ ಹೆಚ್.ಪಿ.ತನುಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಹೆಚ್.ಎಲ್.ರಮೇಶ್, ಕೆ.ವಿ.ಉಮೇಶ್, ಪುಟ್ಟೇಗೌಡ, ಕ್ರೀಡಾ ಸಮಿತಿ ಅಧ್ಯಕ್ಷ ಬೊಜೇಗೌಡ, ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷ ಹೆಚ್.ಆರ್.ಪ್ರದೀಪ್ ರೆಡ್ಡಿ, ಕಣಿವೆ ರಾಜ ಇತರರು ಹಾಜರಿದ್ದರು.

ಗ್ರಾಮದ ಮಹಿಳೆಯರು, ಮಕ್ಕಳು ಮತ್ತು ಪುರುಷರು ಭಾಗವಹಿಸಿ ಬಿಂದಿಗೆಯಲ್ಲಿ ನೀರು ತುಂಬಿ ಓಡುವುದು, ಕೆರೆದಡ, ಚಮಚದಲ್ಲಿ ನಿಂಬೆಹಣ್ಣು ಹಿಡಿದು ಓಡುವುದು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಡಿಕೆ ಒಡೆಯುವುದು, ಹಗ್ಗ ಜಗ್ಗಾಟ, ಮಕ್ಕಳಿಗೆ ಚಿನ್ನಿದಾಂಡು, ಗೋಲಿ ಇತರೆ ಹಲವಾರು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸಿ ಸಂತೋಷಪಟ್ಟರು.

Related Articles

Leave a Reply

Your email address will not be published. Required fields are marked *

Back to top button
error: Content is protected !!