ಪ್ರಕಟಣೆ

ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧ

ನಿಷೇಧಾಜ್ಞೆ
**********
ಮಡಿಕೇರಿ ಮಾ.06:-ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ದಿ ಕರ್ನಾಟಕ ಇರಿಗೇಷನ್ ಆಕ್ಟ್, 1965 ರ ಕಲಂ 46 ರಲ್ಲಿರುವಂತೆ ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 133 ಆರ್/ಡಬ್ಲ್ಯು ಕಲಂ 144 ರಲ್ಲಿ ದತ್ತವಾದ ಅಧಿಕಾರದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಅಕ್ರಮ/ ಅನಧಿಕೃತವಾಗಿ ಖಾಸಗಿ ಚಟುವಟಿಕೆಗಳಿಗೆ ಪಂಪ್‍ಸೆಟ್ ಬಳಸಿ ಅಥವಾ ಕಾಲುವೆಗಳ ಮುಖಾಂತರ ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಉಲ್ಲಂಘನೆಯು ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಕಾಯ್ದೆ 2005 ರ ಸೆಕ್ಷನ್ 51 ಬಿ ರಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!