ಕುಶಾಲನಗರ,ಮಾ 8: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದ ಹಿನ್ನಲೆ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಯಿತು.
ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭವಿಸಿದ್ದ ಹಿನ್ನಲೆ ಟ್ಯಾಂಕರ್ ನ ಮೂಲಕ ನೀರು ಸರಬರಾಜು ಮಾಡಲಾಯಿತು. ಪಂಚಾಯಿತಿಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆ ಈ ಸಮಸ್ಯೆ ತಲೆದೂರಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಹಾಗೂ ವಿನಾಯಕ ಬಡಾವಣೆಯಲ್ಲಿ ಹೆಚ್ಚು ನೀರಿನ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಹಾಗೆಯೇ ತಾತ್ಕಾಲಿಕವಾಗಿ ಖಾಸಗಿ ಕೊಳವೆ ಬಾವಿಗಳಿಂದ ಪೈಲ್ ಸಂಪರ್ಕ ಕೊಟ್ಟು ನೀರು ಪೂರೈಸಲಾಗುತ್ತಿದೆ ಎಂದ ಅವರು, ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯು ಸಂಪೂರ್ಣ ಕಳಪೆ ಹಾಗೂ ಅಪೂರ್ಣವಾಗಿದೆ. ಇದರ ಕಾರಣವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಶಾಸಕರಾದ ಡಾ.ಮಂತರ್ ಗೌಡರವರ ಗಮನಕ್ಕೆ ತರಲಾಗಿದ್ದು, ಶಾಸಕರು ಆದಷ್ಟು ಬೇಗನೇ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಾರ್ವಜನಿಕರು ಯಾರೂ ಕೂಡಾ ನೀರು ಪೂಲು ಮಾಡದೇ ಮಿತವಾಗಿ ನೀರನ್ನು ಬಳಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭ ನೀರುಗಂಟಿ ವಸಂತ್ ಕುಮಾರ್ ಹಾಗೂ ಗ್ರಾಮಸ್ಥರು ಇದ್ದರು.
Back to top button
error: Content is protected !!