ಟ್ರೆಂಡಿಂಗ್

ತೊರೆನೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ: ಸಾಧಕ ಸ್ತ್ರೀಯರಿಗೆ ಗೌರವ ಸಮರ್ಪಣೆ

ಕುಶಾಲನಗರ, ಮಾ.9: ಕುಶಾಲನಗರದ ಕನ್ನಡಸಿರಿ ಸ್ನೇಹ ಬಳಗ ಹಾಗೂ ತೊರೆನೂರಿನ ಶನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಕಾರ್ಯಕ್ರಮ‌ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಉನ್ನತ ಸ್ಥಾನ ಅಲಂಕರಿಸಿ ಉತ್ತಮ ಸಾಧನೆ ತೋರುತ್ತಿದ್ದಾರೆ.‌ಮಹಿಳಾ ದಿನದ ಅಂಗವಾಗಿ ಇಂತಹ ಸಾಧಕ ಮಹಿಳೆಯರನ್ನು ಗುರುತಿಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ ವಿಚಾರ. ಮಹಿಳೆಯರು ಪುರುಷ ಸಮಾನವಾದ ಎಲ್ಲಾ ಕ್ಷೇತ್ರದಲ್ಲಿ ಭಾಗವಹಿಸಿ ಉನ್ನತ ಹುದ್ದೆಯನ್ನು ಸಹ ಅಲಂಕರಿಸಿ‌ ತಮ್ಮ ಸಾಮರ್ಥ್ಯ ತೋರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಆರ್ಶಿವಾಚನ ನೀಡಿದರು. ಬದುಕಿನ ಮೌಲ್ಯಗಳನ್ನು ಸಾರುವ ಚಿಂತನೆಯನ್ನು ಸಂಸಾರದಲ್ಲಿ ಬಳಕೆ ಮಾಡಿಕೊಂಡು ತನ್ನ ಕುಟುಂಬದ ಯಶಸ್ಸಿಗೆ ದುಡಿಯುವ ಮಹಿಳೆಯರ ಕಾರ್ಯಕ್ಷಮತೆ ಮೆಚ್ಚುವಂತಹದ್ದು‌. ಅಲ್ಲದೆ ಧಾರ್ಮಿಕ ಆಚರಣೆಗಳು ಬದುಕಿಗೆ ದಾರಿ ದೀಪ. ಅದನ್ನು ಉಳಿಸಿ ಬೆಳೆಸುವ ಕಾರ್ಯದ ಮೂಲಕ ಯುವ ಪೀಳಿಗೆಗೆ ತಿಳಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಸಾಹಿತಿ ಹಂಚೆಟ್ಟೀರ ಫ್ಯಾನ್ಸಿ ಮುತ್ತಣ್ಣ, ಸ್ತ್ರೀ ತಜ್ಞೆ ಡಾ. ಪ್ರತಿಭಾ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯೆ ಫಿಲೋಮಿನಾ, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯ ಎ. ಎಸ್‌. ಐ. ಕುಮಾರಿ, ತೊರೆನೂರು ಪ್ರೌಢಶಾಲಾ ಶಿಕ್ಷಕಿ ವಿ.ಪಿ. ಸವಿತ ಶಿವಕುಮಾರ್, ಕಣಿವೆ ಶಾಲಾ ಶಿಕ್ಷಕಿ ಕಸ್ತೂರಿ ಪಾಂಡುರಂಗ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿ. ಪಿ. ಶಶಿಧರ್, ಕಾಂಗ್ರೆಸ್ ಮುಖಂಡ ನಟೇಶ್ ಗೌಡ, ಗ್ರಾಮಾಂತರ ಪೋಲೀಸ್ ಠಾಣಾಧಿಕಾರಿ ಮೋಹನ್ ರಾಜ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರಂಗ, ಸೂರ್ಯೋದಯ ಸಂಘದ ಅಧ್ಯಕ್ಷ ಜಗದೀಶ್, ಶನೇಶ್ವರ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣೇ ಗೌಡ, ಉಪನ್ಯಾಸಕ ಡಾ. ಜಮೀರ್ ಅಹಮದ್, ಶಿರಂಗಾಲ ದೇವಾಲಯ ಸಮಿತಿಯ ಚಂದ್ರಶೇಖರ್, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ. ಎಸ್. ನಾಗೇಶ್, ಹೆಬ್ಬಾಲೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಂಜುನಾಥ್‌ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!