ಟ್ರೆಂಡಿಂಗ್
ಹುದುಗೂರು ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ
ಕುಶಾಲನಗರ, ಮಾ 09:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ವಿವಿಧ ಹೋಮ ಹವನಗಳು ನಡೆದವು.
ಹಬ್ಬದ ಅಂಗವಾಗಿ ದೇವಾಲಯದಲ್ಲಿ ಮಹಾಗಣಪತಿ ಹೋಮ, ಶ್ರೀ ಮಹಾ ಮೃತ್ಯುಂಜಯ ಹೋಮ, ಶ್ರೀ ರುದ್ರಹೋಮ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಕೇರಳದ ಶ್ರೀ ಹರಿ ಪಣಿಕ್ಕರ್ ನೇತ್ರತ್ವದಲ್ಲಿ ನಡೆದವು.
ನಂತರ ಸಂಜೆ ವಿದ್ಯುತ್ ಅಲಂಕೃತವಾದ ಭವ್ಯ ಮಂಟಪದಲ್ಲಿ ಶ್ರೀ ಸ್ವಾಮಿಯ ವಿಗ್ರಹವನ್ನು ಕುಳ್ಳಿರಿಸಿ ಹುದುಗೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಹೋಮ ಹವನ, ಪೂಜಾ ಕಾರ್ಯಕ್ರಮದಲ್ಲಿ ಕೂಡಿಗೆ, ಕೂಡುಮಂಗಳೂರು, ಯಡವನಾಡು, ಮದಲಾಪುರ ಸೀಗೆಹೊಸೂರು, ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.
ಅಗಮಿಸಿದ್ದ ಭಕ್ತರಿಗೆ ದೇವಾಲಯ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ನಿರ್ದೇಶಕರು, ಹಾಗೂ ಸದಸ್ಯರು ಇದ್ದರು.