ಪ್ರಕಟಣೆ
ಮಾ.10 ರಂದು ರಾಜ್ಯಾದ್ಯಂತ “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮ
ಕುಶಾಲನಗರ, ಮಾ 09: ಕರ್ನಾಟಕ ರಾಜ್ಯ ಪೊಲೀಸ್ ನ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯಾದ್ಯಂತ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಿನಾಂಕ: 10-03-2024 ರಂದು “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುತ್ತದೆ.
ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಿನಾಂಕ:10-03-2024 ರಂದು ಬೆಳಿಗ್ಗೆ 07.30 ಘಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ 3 ಕಿ.ಮೀ ಗಳ Walkathon ಅನ್ನು ಆಯೋಜಿಸಲಾಗಿರುತ್ತದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಪೊಲೀಸ್ನ weg ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಆಯೋಜಿಸಿರುವ 3 ಕಿ.ಮೀ ಗಳ Walkathon ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿನ ಎಲ್ಲಾ ಸಂಘಟನೆಗಳು, ಎಲ್ಲಾ ಸಂಸ್ಥೆಗಳು, ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಎಲ್ಲಾ ಪತ್ರಕರ್ತರು & ಮಾಧ್ಯಮ ಮಿತ್ರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಹಾಗೂ ಡ್ರಮ್ಸ್ ಮತ್ತು ಮಾದಕ ದ್ರವ್ಯ ಮುಕ್ತ ಜಿಲ್ಲೆಯಾಗಿಸಲು ಸಹಕರಿಸುವಂತೆ ಕೋರಿದೆ.