ಕುಶಾಲನಗರ, ಮಾ 11: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುತ್ತಿರುವ ಹಿನ್ನೀರಿನಲ್ಲಿ ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ವಿವಿಧ ಗ್ರಾಮ ಪಂಚಾಯತಿ ಗಳಿಗೆ ಭೇಟಿ ನೀಡಿ ಅಲ್ಲಿನ ಕುಡಿಯುವ ನೀರಿನ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ನೀರಿನ ಅಭಾವ ಎದುರಾಗಿರುವ ಕೂಡುಮಂಗಳೂರು, ಕೂಡಿಗೆ, ತೊರೆನೂರು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಲ ಮೂಲದ ಮಾಹಿತಿ, ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಕಂದಾಯ ಇಲಾಖೆಯ ಪರಿವೀಕ್ಷಕ ಸಂತೋಷ್, ಅಭಿವೃದ್ಧಿ ಅಧಿಕಾರಿ ಮಂಜುಳಾ, ಸಂತೋಷ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
Back to top button
error: Content is protected !!