ಕುಶಾಲನಗರ, ಮಾ 15: ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದರು.
ಒಕ್ಕೂಟದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲೆಯಿಂದ ಒಂದೇ ನಾಮ ಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೆ.ಕೆ ಹೇಮಂತ್ ಕುಮಾರ್ ಅವಿರೋಧವಾಗಿ ಅಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಅಯ್ಕೆ ಪ್ರಮಾಣ ಪತ್ರವನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಹಾಲಿ ಶಾಸಕ, ಲೋಕೋಪಯೋಗಿ ಇಲಾಖೆಯ ಮಾಜಿ ಸಚಿವ ಹಾಗೂ ಒಕ್ಕೂಟದ ಅಧ್ಯಕ್ಷ ಹೆಚ್. ಡಿ. ರೇವಣ್ಣ ಸೇರಿದಂತೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯ ವಿವಿಧ ತಾಲ್ಲೂಕಿನ ನಿರ್ದೇಶಕರು ಹಾಜರಿದ್ದರು.
Back to top button
error: Content is protected !!