ಕುಶಾಲನಗರ, ಮಾ 16: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಹುಲುಗುಂದದಲ್ಲಿರುವ ಹಾರಂಗಿ ಅಣೆಕಟ್ಟೆ ಮುಂಭಾಗದ ನಿರ್ಬಂಧಿತ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಒತ್ತಾಯಿಸಿದ್ದಾರೆ.
ಜಲಾಶಯಕ್ಕೆ ಸೇರಿದ ನಿರ್ಬಂಧಿತ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಅನಧಿಕೃತವಾಗಿ ಮನೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಿ ಮನೆ ತೆರವುಗೊಳಿಸುವಂತೆ ಹಾರಂಗಿ ಅಣೆಕಟ್ಟೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ನಿಗಮದ ಅಧೀಕ್ಷಕ ಅಭಿಯಂತರ ಕೆ.ಕೆ.ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Back to top button
error: Content is protected !!