ಪ್ರಕಟಣೆ

ಏ. 5 ರಂದು ಹರಕೆ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ

ಕುಶಾಲನಗರ, ಮಾ. 22: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಹರಕೆ ಚೌಡೇಶ್ವರಿ ದೇವಿ ಮತ್ತು ನಾಗದೇವರ ವಾರ್ಷಿಕೋತ್ಸವವು ಏಪ್ರಿಲ್ 5 ರಂದು ನಡೆಯಲಿದೆ.
ಅದರ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ದುರ್ಗಾಹೋಮ, ಕಲಾವೃದ್ಧಿ ಹೋಮ, ಅಭಿಷೇಕ, ಕಳಸ ಪ್ರತಿಷ್ಟೆ ಹಾಗೂ ದೇವಿಗೆ ವಿವಿಧ ಅಭಿಷೇಕ ನಡೆಯಲಿವೆ. ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 7 ಗಂಟೆಗೆ ದೇವಾಲಯದ ಆವರಣದಲ್ಲಿ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಕೆ.ಸಿ ರವಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!