ಸಭೆ

ಹೆಬ್ಬಾಲೆ ಕಾಂಗ್ರೆಸ್ ಕಾರ್ಯಕರ್ತರ ಸಭೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು.

ಕುಶಾಲನಗರ ಮಾ 28: ತಾಲ್ಲೂಕಿನ ಹೆಬ್ಬಾಲೆ ಅಶ್ವಿನಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.

ಶಾಸಕ ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೈಗೊಂಡಿರುವ ಜನಪರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಕಾಂಗ್ರೆಸ್ ಪರ ಅಲೆ ಸೃಷ್ಟಿಸುವಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೋಜನೆಯನ್ನು ಜಾರಿಗೆ ತರಲಿಲ್ಲ.ಬದಲಿಗೆ ಅಂಬಾನಿ ಸೇರಿದಂತೆ ಕಾರ್ಪೋರೆಟ್ ಗಳ ಏಳಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದರು. ಜನಸಾಮಾನ್ಯರಿಗೆ ಐದು ನೂರು ರೂಪಾಯಿಗೆ ಸಿಗುತ್ತಿತ್ತ ಅಡುಗೆ ಗ್ಯಾಸ್ ಸಿಲಿಂಡರ್ ಅನ್ನು ಒಂದು ಸಾವಿರಕ್ಕೂ ಅಧಿಕ ರೂಪಾಯಿಗೆ ಏರಿಕೆ ಮಾಡಿದ ಮೋದಿ ಮತ್ತೊಂದು ಉಚಿತ ಸಿಲಿಂಡರ್ ನೀಡುವುದಾಗಿ ನಾಟಕವಾಡಿದರು. ಅಧಿಕಾರಕ್ಕೆ ಬಂದು ಹತ್ತು ವರ್ಷ ಕಳೆದರೂ ನಿರುದ್ಯೋಗ ಸಮಸ್ಯೆ ಬಗೆಹರಿಸಲಿಲ್ಲ.ಒಂದು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ ಮೋದಿ ನುಡಿದಂತೆ ನಡೆಯದೆ ನಿರುದ್ಯೋಗ ಯುವಜನತೆಗೆ ಅನ್ಯಾಯ ಮಾಡಿದ್ದಾರೆ. ಇಂತಹ ಸುಳ್ಯ ಹೇಳುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಹತ್ತು ಕಳೆದರೂ ಯಾವುದೇ ಅಭಿವೃದ್ಧಿ ಮಾಡದ ಪ್ರಧಾನಿ ಮೋದಿ ಜನಸಾಮಾನ್ಯರ ಹಾಗೂ ಬಡಜನತೆ ಬದುಕಿನ ಮೇಲೆ ಚೆಲ್ಲಾಟವಾಡಿದ್ದಾರೆ.ಇದನ್ನು ‌ಮರೆಮಾಚಲು ಜನಸಾಮಾನ್ಯರನ್ನು ಭಾವನಾತ್ಮಕವಾಗಿ ಸೆಳೆಯುವ ಉದ್ದೇಶದಿಂದ ಯದುವೀರ್ ಒಡೆಯರ್ ಅವರನ್ನು ಲೋಕಸಭಾ ಚುನಾವಣೆ ಅರ್ಭ್ಯರ್ಥಿಯಾಗಿ ಮಾಡಿದ್ದಾರೆ ಎಂದು ಟೀಕಿಸಿದರು.

ಕೆಪಿಸಿಸಿ ಕಾರ್ಯದರ್ಶಿ .ಪಿ.ಚಂದ್ರಕಲಾ ಮಾತನಾಡಿ, ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಬಡಜನರ ಬದುಕಿಗೆ ಪೆಟ್ಟು ನೀಡಿರುವ ಮೋದಿ ನೇತೃತ್ವದ ಬಿಜೆಪಿ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಹೆಬ್ಬಾಲೆ ಗ್ರಾಮ ಪಂಚಾಯತಿ ‌ಮಾಜಿ ಅಧ್ಯಕ್ಷ ಎಚ್.ಎಸ್.ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಂಜುನಾಥ್, ಎಚ್.ಟಿ.ದಿನೇಶ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎನ್.ಬಸವರಾಜು, ಡಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಎಚ್.ಕೆ.ನಟೇಶ್ ಗೌಡ,ಕುಶಾಲನಗರ ಪುರಸಭೆ ಮಾಜಿ ಸದಸ್ಯ ಜೋಸೆಫ್‌ ವಿಕ್ಟರ್ ಸೋನ್ಸ್,ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಕೆ.ರವೀಂದ್ರನಾಥ್ ಮುಖಂಡರಾದ ಎಚ್.ಜೆ.ನಾರಾಯಣ, ಗಣೇಶ್,ಕೆ.ಎಸ್.ಕೃಷ್ಣೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!