ಕುಶಾಲನಗರ, ಆ 13: ಚೆನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಬರೆಗೆ ಗುದ್ದಿದೆ.
ಹಾಸನದಿಂದ ಮಡಿಕೇರಿಗೆ ಹೊರಟ್ಟಿದ್ದ ಬಸ್ ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ನಬ್ಕೇಡ್ ಸೆಟ್ ಪರ್ಜ್ ತುಂಡಾದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಬದಿ ಬರೆಗೆ ಡಿಕ್ಕಿಯಾಗಿದೆ. ಪ್ರಯಾಣಿಕರ ಪೈಕಿ 11 ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕುಶಾಲನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Back to top button
error: Content is protected !!