ಕೊಡಗಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿ ಮಲ್ಲಿಕಾರ್ಜುನ ನಗರಕ್ಕೆ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಸ್ಥಳ ಪರಿಶೀಲನೆ ನಡೆಸಿದರು.
ಕಳೆದ 12 ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಗೆ ಮನೆ ಕಳೆದುಕೊಂಡ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಗೋಪಾಲ ಕುಟುಂಬದವರಿಗೆ ೯೫,೧೦೦ ರೂ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.
ನಂತರ ಡಿಸಿ ಅವರ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Back to top button
error: Content is protected !!