ಪ್ರಕಟಣೆ

ನಳಂದ ಇಂಟರ್ನ್ಯಾಷನಲ್ ಇಂಡಿಪೆಂಡೆಂಟ್ ಪ್ರಿ ಯೂನಿವರ್ಸಿಟಿ ಕಾಲೇಜು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ.

ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

ಕುಶಾಲನಗರ, ಏ 11: ಕಾಲೇಜಿನ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳೆಲ್ಲರಲ್ಲೂ 100% ಫಲಿತಾಂಶವನ್ನು ದಾಖಲಿಸಿದೆ ಶೇಕಡ 60ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿದ್ದು 20 ವಿದ್ಯಾರ್ಥಿಗಳು ವಿವಿಧ ವಿಷಯಗಳಾದ ಕಂಪ್ಯೂಟರ್ ಸೈನ್ಸ್ ,  ಬಿಸಿನೆಸ್ ಸ್ಟಡೀಸ್ , ಅಕೌಂಟೆನ್ಸಿ ವಿಷಯಗಳಲ್ಲಿ ನೂರಕ್ಕೆ ನೂರು (100%) ಅಂಕಗಳನ್ನು ಗಳಿಸಿದ್ದಾರೆ.

ವಿಜ್ಞಾನ ವಿಭಾಗದ ಕುಮಾರಿ ಗಾಯತ್ರಿ .ಕೆ ಎಂಬ ವಿದ್ಯಾರ್ಥಿಯು 600 ಕ್ಕೆ 588 ಅಂಕಗಳನ್ನು ಗಳಿಸಿ ಕಾಲೇಜಿನ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕುಮಾರಿ ಮುತ್ತಮ್ಮ ಎಂ ಸಿ ಎಂಬ ವಿದ್ಯಾರ್ಥಿಯು 600 ಕ್ಕೆ 586 ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದ ಪ್ರಥಮ ಸ್ಥಾನವನ್ನು ದಾಖಲಿಸಿದ್ದಾರೆ.

ಉತ್ತಮ ಫಲಿತಾಂಶ ಬಂದಿರುವುದಕ್ಕಾಗಿ ಕಾಲೇಜಿನ ಆಡಳಿತ ಮಂಡಳಿಯವರು, , ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಳಂದವು ಉಪಶಾಂತವಾದ ವಾಸಸ್ಥಾನವಾಗಿದ್ದು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಾದ ಈಜು, ಕುದುರೆ ಸವಾರಿ, ಹಾಗೂ ಟೇಬಲ್ ಟೆನ್ನಿಸ್ ನಂತಹ ಆಟೋಟಗಳ ಕಲಿಕೆಗೆ ಪೂರಕವಾಗಿದೆ. ವಿದ್ಯಾರ್ಥಿಗಳಿಗೆ ನುರಿತ ಅಧ್ಯಾಪಕರಿಂದ ಜೆಇಇ, ನೀಟ್ ಹಾಗೂ ಸಿಇಟಿ ಪರೀಕ್ಷೆಗಳಿಗೆ ತರಬೇತಿ ನೀಡಲು ಪ್ರತ್ಯೇಕ ವ್ಯವಸ್ಥೆ ಇದ್ದು, ತರಬೇತಿಯು ನಿರಂತರವಾಗಿ ನಡೆಯುತ್ತಿರುತ್ತದೆ. ಅದೇ ರೀತಿಯಾಗಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ಕಾಮರ್ಸ್ ಮತ್ತು ಟ್ಯಾಲಿ ವಿಷಯಗಳ ತರಬೇತಿಯನ್ನು ನೀಡಲಾಗುತ್ತಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!