ಕುಶಾಲನಗರ, ಏ 17: ಕುಶಾಲನಗರದ ಬೈಚನಹಳ್ಳಿಯ ಬಿಜೆಪಿ ಬೆಂಬಲಿತ ಬೂತ್ ಮಟ್ಟದ ಪ್ರಮುಖರ ತಂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕುಶಾಲನಗರ ಕಾರ್ಮಿಕ ಘಟಕದ ನಗರ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಗಣೇಶ್ ಮತ್ತು ಸಂಗಡಿಗರು ನೂತನ ಶಾಸಕರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ತತ್ವ ಸಿದ್ದಾಂತ ಬೆಂಬಲಿಸಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೊಸ 15 ಮಂದಿ ಸದಸ್ಯರಿಗೆ ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭಾ ಸದಸ್ಯರಾದ ಖಲೀಮುಲ್ಲಾ, ಪ್ರಕಾಶ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್, ಕುಶಾಲನಗರ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಕುಮಾರ್, ಪ್ರಮುಖರಾದ ರಂಜನ್, ಅನಿಲ್, ವಿಕ್ರಂ, ರೋಶನ್ ಮತ್ತಿತರರು ಇದ್ದರು.
Back to top button
error: Content is protected !!