ಕುಶಾಲನಗರ, ಏ 18:
ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ ನಗರ ಪೊಲೀಸ್ ತಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ/ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್.ಮೋಹನ್ ಕುಮಾರ್, ಡಿವೈಎಸ್ಪಿ, ವಿರಾಜಪೇಟೆ ಉಪ ವಿಭಾಗ, ಶಿವರುದ್ರ.ಬಿ.ಎಸ್. ಸಿಪಿಐ, ವಿರಾಜಪೇಟೆ ವೃತ್ತ ಹಾಗೂ ರವೀಂದ್ರ, ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 17-04-2024 ರಂದು ವಿರಾಜಪೇಟೆಯ ಮೀನುಪೇಟೆಯಲ್ಲಿ ನಿಷೇಧಿತ ಮಾದಕ ಮಾರಾಟ/ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಕೇರಳ ಮೂಲದ ಮೀನುಪೇಟೆ ನಿವಾಸಿಯಾದ ಶಂಷುದ್ದೀನ್, 36 ವರ್ಷ ಎಂಬುವನನ್ನು 582 ಗ್ರಾಂ ಗಾಂಜಾ ನಿಷೇದಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಲಾಗಿದೆ.
ದಿನಾಂಕ: 18-04-2024 ರಂದು ಪೆರಂಬಾಡಿಯ ನವನಗರದ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ/ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಎಡಪಾಲ ಗ್ರಾಮದ ನಿವಾಸಿಗಳಾದ 1) ಸಿ.ವೈ.ಇಸಾಕ್, 34 ವರ್ಷ ಮತ್ತು 2) ಎಂ.ಜಿ.ನಂದಕುಮಾರ, 45 ವರ್ಷ ಎಂಬುವನನ್ನು 2 ಕೆ.ಜಿ 378 ಗ್ರಾಂ ಗಾಂಜಾ ನಿಷೇದಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.
ಸದರಿ ಪ್ರಕರಣಗಳ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು. ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!