ಕುಶಾಲನಗರ, ಏ 02: ಕೂಡಮಂಗಳೂರು ಗ್ರಾಮ ಪಂಚಾಯಿತಿಯ ಹುಲುಗುಂದ( ಹಾರಂಗಿ ) ಗ್ರಾಮದಲ್ಲಿ
ಮತದಾನದ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು .
ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ನಡೆಯುವ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು ಹುಲುಗುಂದ( ಹಾರಂಗಿ ) ಗ್ರಾಮದ ವಿವಿಧ ಮಹಿಳಾ ಸಂಘದ ಮಹಿಳೆಯರು ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ. ಮತದಾನ ನಮ್ಮೆಲ್ಲರ ಹಕ್ಕು ಮತದಾನದಿಂದ ಯಾರು ದೂರ ಉಳಿಯಬಾರದು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಈ ಬಾರಿ ಶೇಕಡವಾರು ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಮಹಿಳಾ ಸಂಘದ ಮಹಿಳೆಯರು ರಂಗೋಲಿ ಸ್ಪರ್ಧೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಪ್ರಜಾಪ್ರಭುತ್ವವನ್ನು ಬಲಗೊಳಿಸುವ ಶಕ್ತಿ ಮತದಾರರಿಗೆ ಇದೆ ಎಲ್ಲ ಮತದಾರರು ನಮ್ಮ ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸುಭದ್ರವಾದ ದೇಶ ಕಟ್ಟಲು ಸಹಕರಿಸಿ ಎಂದು ಮನವಿ ಮಾಡಿದರು. ಸೆಲೆಬ್ರಿಟಿಗಳು ತಾವಾಗಿ ಮುಂದೆ ಬಂದು ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಪ್ರಚಾರ ಮಾಡುವ ಮುಖಾಂತರ 100% ಮತದಾನ ಆಗುವಂತೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.
ನಂತರ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮದ ಕಚೇರಿ ಅವರಣದಲ್ಲಿ ರಂಗೋಲಿ
ಸ್ಪರ್ಧೆ ಮೂಲಕ ಜಾಗೃತಿ ಜಾಥ ನಡೆಸಿ ಹರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಸಮಾಜದ ಪ್ರತಿಯೊಂದು ಮಾರ್ಗದವರು ತಪ್ಪದೆ ಮತದಾನ ಚಲಾಯಿಸಬೇಕೆಂದು ಚುನಾವಣಾ ಆಯೋಗದ ಗುರಿಯಾಗಿದೆ ಅದರಂತೆ ಪ್ರತಿ ಎಲ್ಲರೂ ಮತದಾನ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು ಈ ಸಂದರ್ಭದಲ್ಲಿ ಸದಸ್ಯರಾದ ಮಣಿಕಂಠ ಮಹಿಳಾ ಸಂಘದ ಪ್ರಮುಖರು ಅಧಿಕಾರಿಗಳು ಉಪಸ್ಥಿತರಿದ್ದರು.
Back to top button
error: Content is protected !!