ಪ್ರಕಟಣೆ

ನಳಂದ ಇಂಟರ್ನ್ಯಾಷನಲ್ ಇಂಡಿಪೆಂಡೆಂಟ್ ಪ್ರಿ ಯೂನಿವರ್ಸಿಟಿ ಕಾಲೇಜು 2023 – 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನ ಫಲಿತಾಂಶ.

ಕುಶಾಲನಗರ, ಏ 27:  ನಳಂದ ಇಂಟರ್ನ್ಯಾಷನಲ್ ಇಂಡಿಪೆಂಡೆಂಟ್ ಪ್ರಿ ಯೂನಿವರ್ಸಿಟಿ ಕಾಲೇಜು 2023 – 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನ ಫಲಿತಾಂಶ ಹೊರಬಂದಿದೆ.

ಕಾಲೇಜಿನ ವಿಜ್ಞಾನ ವಿಭಾಗದ ಗಾಯತ್ರಿ .ಕೆ ಎಂಬ ವಿದ್ಯಾರ್ಥಿನಿಯು ಕನ್ನಡ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಮರುಮಾಲ್ಯಮಾಪನದ ನಂತರ ನೂರಕ್ಕೆ ನೂರು ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಕ್ಕೆ 8ನೇ ಸ್ಥಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಮುತ್ತಮ್ಮ ಎಂ.ಸಿ ಎಂಬ ವಿದ್ಯಾರ್ಥಿನಿಯು ವಾಣಿಜ್ಯ ವಿಭಾಗದಲ್ಲಿ 586 ಅಂಕಗಳನ್ನು ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಕಾಲೇಜು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳೆರಡರಲ್ಲೂ ಪ್ರಥಮ ಶ್ರೇಣಿಯಲ್ಲಿ 100% ಫಲಿತಾಂಶವನ್ನು ದಾಖಲಿಸಿದೆ 60% ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಪ್ರಸ್ತುತ ಕನ್ನಡ, ಜೀವಶಾಸ್ತ, ಗಣಿತ, ಅಕೌಂಟೆನ್ಸಿ, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಒಟ್ಟು 22 ಸೆಂಟಮ್ ಗಳಿಸುವಲ್ಲಿ ಸಂಸ್ಥೆಯು ಯಶಸ್ವಿಯಾಗಿದೆ. ಕೊಡಗಿನ ಸುತ್ತ ಮುತ್ತಲಿನ ಕಾಲೇಜುಗಳಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದಿರುವುದು ಸಂಸ್ಥೆಯ ಹೆಮ್ಮೆಯ ವಿಷಯವಾಗಿದೆ.

ಈ ದಾಖಲೆಯ ಫಲಿತಾಂಶ ಕುರಿತು ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಅಧ್ಯಾಪಕ ವೃಂದದವರು ಹರ್ಷ ವ್ಯಕ್ತಪಡಿಸುವುದರ ಜೊತೆಗೆ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

ಪ್ರಾಂಶುಪಾಲರ ಹೇಳಿಕೆಯಂತೆ ಈಗಾಗಲೇ 2024-25 ನೇ ಸಾಲಿನ ಕಾಲೇಜಿನ ದಾಖಲಾತಿಯು ನಡೆಯುತ್ತಿದ್ದು ನಳಂದ ಇಂಟರ್ನ್ಯಾಷನಲ್ ಇಂಡಿಪೆಂಡೆಂಟ್ ಪ್ರಿ ಯೂನಿವರ್ಸಿಟಿ ಕಾಲೇಜು 2023 – 24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನ ಫಲಿತಾಂಶ.

ಕಾಲೇಜಿನ ವಿಜ್ಞಾನ ವಿಭಾಗದ ಗಾಯತ್ರಿ .ಕೆ ಎಂಬ ವಿದ್ಯಾರ್ಥಿನಿಯು ಕನ್ನಡ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಮರುಮಾಲ್ಯಮಾಪನದ ನಂತರ ನೂರಕ್ಕೆ ನೂರು ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಕ್ಕೆ 8ನೇ ಸ್ಥಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಮುತ್ತಮ್ಮ ಎಂ.ಸಿ ಎಂಬ ವಿದ್ಯಾರ್ಥಿನಿಯು ವಾಣಿಜ್ಯ ವಿಭಾಗದಲ್ಲಿ 586 ಅಂಕಗಳನ್ನು ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಕಾಲೇಜು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳೆರಡರಲ್ಲೂ ಪ್ರಥಮ ಶ್ರೇಣಿಯಲ್ಲಿ 100% ಫಲಿತಾಂಶವನ್ನು ದಾಖಲಿಸಿದೆ 60% ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಪ್ರಸ್ತುತ ಕನ್ನಡ, ಜೀವಶಾಸ್ತ, ಗಣಿತ, ಅಕೌಂಟೆನ್ಸಿ, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಒಟ್ಟು 22 ಸೆಂಟಮ್ ಗಳಿಸುವಲ್ಲಿ ಸಂಸ್ಥೆಯು ಯಶಸ್ವಿಯಾಗಿದೆ. ಕೊಡಗಿನ ಸುತ್ತ ಮುತ್ತಲಿನ ಕಾಲೇಜುಗಳಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದಿರುವುದು ಸಂಸ್ಥೆಯ ಹೆಮ್ಮೆಯ ವಿಷಯವಾಗಿದೆ.

ಈ ದಾಖಲೆಯ ಫಲಿತಾಂಶ ಕುರಿತು ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಅಧ್ಯಾಪಕ ವೃಂದದವರು ಹರ್ಷ ವ್ಯಕ್ತಪಡಿಸುವುದರ ಜೊತೆಗೆ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

ಪ್ರಾಂಶುಪಾಲರ ಹೇಳಿಕೆಯಂತೆ ಈಗಾಗಲೇ 2024-25 ನೇ ಸಾಲಿನ ಕಾಲೇಜಿನ ದಾಖಲಾತಿಯು ನಡೆಯುತ್ತಿದ್ದು ವಸತಿ ಮತ್ತು ವಸತಿ ರಹಿತ ವಿಭಾಗದಲ್ಲಿ ಕೆಲವೇ ಸೀಟುಗಳು ಉಳಿದಿವೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ – 99000 78701

Related Articles

Leave a Reply

Your email address will not be published. Required fields are marked *

Back to top button
error: Content is protected !!