ಸಿದ್ದಾಪುರ, ಮೇ 24: ಸಂಶಯಾಸ್ಪದ ರೀತಿಯಲ್ಲಿ ಕಾಡಾನೆಯ ಮೃತದೇಹ ಪತ್ತೆಯಾದ ಘಟನೆ ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ನಡೆದಿದೆ.
ತ್ಯಾಗತ್ತೂರು ಗ್ರಾಮದ ಎಂ ಎಂ ಗಿರೀಶ್ ಎಂಬುವರ ಕಾಫಿ ತೋಟದ ಒಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂಧರ್ಭದಲ್ಲಿ ದುರ್ವಾಸನೆ ಬೀರುತ್ತಿದ್ದ ಹಿನ್ನೆಲೆಯಲ್ಲಿ ತೋಟದ ಒಳಭಾಗದಲ್ಲಿ ಪರಿಶೀಲಿಸಿದ ಸಂಧರ್ಭದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾಡಾನೆಯ ಮೃತದೇಹ ಗೋಚರಿಸಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲಿಸಿ ಕಾಡಾನೆಗಳ ನಡುವಿನ ಕಾದಾಟದಲ್ಲಿ ಅಂದಾಜು 18 ರಿಂದ 20 ವರ್ಷ ಪ್ರಾಯದ ಗಂಡಾನೆ ಸಾವನ್ನಪ್ಪಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಒಂದು ವಾರಗಳ ಹಿಂದೆ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳಕ್ಕೆ ಡಿಸಿಎಫ್ ಶಂಕರ, ಎಸಿಎಫ್ ಎ ಎ ಗೋಪಾಲ್, ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಹಾಗೂ ವೈದ್ಯಾಧಿಕಾರಿ ಚಿಟ್ಟಿಯಪ್ಪ ಇನ್ನಿತರ ಸಿಬ್ಬಂದಿಗಳು ಭೇಟಿ ನೀಡಿದ್ದು,ಮರಣೋತ್ತರ ಪರೀಕ್ಷೆ ನಡೆಸಿ ಕಳೆ ಬರಹಗಳನ್ನು ಸ್ಥಳದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದರು.
Back to top button
error: Content is protected !!