ಕುಶಾಲನಗರ, ಜೂ 01: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರನಗರ ಕುಶಾಲನಗರ ರಸ್ತೆಯಲ್ಲಿ ದಿನಾಂಕ: 31-05-2024 ರಂದು ಬೆಳಿಗ್ಗೆ ಸುಮಾರು 09.00 ಗಂಟೆ ಸಮಯದಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಮೃತನಾಗಿರುವ ಕುರಿತು ದೂರು ಸ್ವೀಕರಿಸಿದ್ದು,ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ 279, 304(ಎ) ಐಪಿಸಿ ಅನೇಕ ಯಲ್ಲಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಸುಂದರನಗರ ವಿನಾಯಕ ಬಡವಾಣೆ ನಿವಾಸಿಯಾದ ತುಳಸಿ.ಟಿ ಗಂಡ: ಪರಮೇಶ್ ರವರ ಅಪ್ರಾಪ್ತ ವಯಸ್ಸಿನ ಮಗ ಟ್ರಾಕ್ಟರ್ ಅನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನಕ್ಕೆ ಅಪಘಾತಗೊಳಿಸಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಹಾಗೂ ಆರೋಪಿಯು ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ ಸದರಿ ಟ್ರ್ಯಾಕ್ಟರ್ ಮಾಲೀಕರಾದ ತುಳಸಿ.ಟಿ ಗಂಡ: ಪರಮೇಶ್ ರವರ ವಿರುದ್ಧ ಪ್ರಕರಣವನ್ನು ದಾಖಲಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಟ್ರಾಕ್ಟರ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದ ಅಪ್ರಾಪ್ತ ವಯಸ್ಸಿನ ಆರೋಪಿಯು ಈ ಹಿಂದೆ ದಿನಾಂಕ: 31-05-2023 ರಂದುಸುಂದರನಗರ ಹಾರಂಗಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿರುವ ಸಂದರ್ಭ ಪಾದಚಾರಿಗೆ ಅಪಘಾತಗೊಳಿಸಿರುವ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯು ಅಪ್ರಾಪ್ತ ವಯಸ್ಸಿನವಾಗಿರುವುದರಿಂದ ಸದರಿ ಟ್ರ್ಯಾಕ್ಟರ್ ಮಾಲೀಕರಾದ ಶ್ರೀಮತಿ ತುಳಸಿ.ಟಿ : 2 279, 337, 338 22 & 4(1) 8.2 181 22 ಪ್ರಕರಣದ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದು, ವಾಹನದ ಮಾಲೀಕರಾದ ತುಳಸಿ.ಟಿ ರವರಿಗೆ ದಿನಾಂಕ: 08-09-2023 ರಂದು ಘನ ಸಿಜೆ & ಜೆಎಂಎಫ್ಸಿ, ನ್ಯಾಯಾಲಯ, ಕುಶಾಲನಗರದಲ್ಲಿ ರೂ. 25,000/-ಗಳ ದಂಡ ಹಾಗೂ ಒಂದು ದಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿರುತ್ತದೆ.
ವಿಶೇಷ ಸೂಚನೆ:- ರಸ್ತೆಯಲ್ಲಿ ವಾಹನ ಚಾಲಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮತ್ತು ವಾಹನ ಪರವಾನಿಗೆ (License) ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಅಸ್ಪದ ನೀಡಬಾರದು ಮತ್ತು ಅಪಾಪ ವಯಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು & ಅತೀ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸುವುದು ಅಥವಾ ಬೈಕ್/ಕಾರುಗಳನ್ನು ಚಲಾಯಿಸುತ್ತಾ ಯಾವುದೇ ರೀತಿಯ ಸ್ಟಂಟ್ಗಳನ್ನು ಮಾಡಿರುವ ಭಾವಚಿತ್ರ/ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram, Twitter & etc.) ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡುವುದು ಮತ್ತು ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಆಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.
Back to top button
error: Content is protected !!