ಚುನಾವಣೆ

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ: ಮತಯಾಚನೆ

ಕುಶಾಲನಗರ, ಜೂ 01:
ದೇಶದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ.‌ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 50 ಸಾವಿರ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು‌ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚುರಂಜನ್ ವಿಶ್ವಾಸ ವ್ಯಕ್ತಪಡಿಸಿದರು.

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಕುಶಾಲನಗರ ಭಾಗದ ಶಾಲಾ ಕಾಲೇಜುಗಳಲ್ಲಿ ಮತಯಾಚನೆ ಮಾಡಿದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೋದಿ ಈಗಾಗಲೆ ವಿಶ್ವಗುರುವಾಗಿ ಗುರುತಿಸಿಕೊಂಡಿದ್ದಾರೆ. ಭಾರತದ ಆರ್ಥಿಕತೆ ಕೂಡ ಇತರೆ ದೇಶಗಳಿಂತ‌ ಮಿಗಿಲಾಗಿದೆ. ಅವರು ಮತ್ತೊಮ್ಮೆ ಪ್ರಧಾನಿಯಾಗುವ ಮೂಲಕ ದೇಶ ಮತ್ತಷ್ಟು ಅಭಿವೃದ್ಧಿ ಕಾಣಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲ್ಲಲಿದೆ. ಕಾಂಗ್ರೆಸ್ ಗೆ ಮೂರರಿಂದ ನಾಲ್ಕು ಸ್ಥಾನ‌ ಮಾತ್ರ ಗೆಲುವು ಸಾಧ್ಯ ಎಂದರು.

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ‌ಕಳೆದ 10 ದಿನಗಳಿಂದ ಮತದಾರರನ್ನು ಭೇಟಿಯಾಗಿ ಮಾತಯಾಚಿಸಲಾಗುತ್ತಿದೆ. ಬಿಜೆಪಿಯ ಧನಂಜಯ ಸರ್ಜಿ ಹಾಗೂ ಜೆಡಿಎಸ್ ನ ಭೋಜೇ ಗೌಡರಿಗೆ ಮತ‌ನೀಡುವ ಮೂಲಕ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕಿದೆ ಎಂದು ಅವರು ಕೋರಿದರು.

ಕುಶಾಲನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪದವಿಪೂರ್ವ ಕಾಲೇಜು ಸೇರಿದಂತೆ ವಿವಿಧ ಖಾಸಗಿ ಶಾಲಾ ಕಾಲೇಜುಗಳಲ್ಲಿ ಅಪ್ಪಚ್ಚುರಂಜನ್ ಮತಯಾಚನೆ ಮಾಡಿದರು.

ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಎಂ.ಎಂ.ಚರಣ್, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಮಧುಸೂದನ್, ಪುರಸಭೆ ಸದಸ್ಯರಾದ ಬಿ.ಜೈವರ್ಧನ್, ಅಮೃತ್ ರಾಜ್, ಪ್ರಮುಖರಾದ ವೈಶಾಖ್, ಪ್ರವೀಣ್, ಆದರ್ಶ್, ಗಣಪತಿ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!