ಮಡಿಕೇರಿ ಜೂ.01:-ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ಜೂನ್, 04 ರಂದು ನಡೆಯಲಿದ್ದು, ಈ ದಿನದಂದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ಮತ್ತು 144(ಎ) ಹಾಗೂ ಕರ್ನಾಟಕ ಪೊಲೀಸ್ ಆಕ್ಟ್ 1963 ರ ಕಲಂ 35 ರಡಿ ದತ್ತವಾದ ಅಧಿಕಾರದಂತೆ ಜೂನ್, 04 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
Back to top button
error: Content is protected !!