ಕುಶಾಲನಗರ ಜೂ 03: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಕುಶಾಲನಗರದಲ್ಲಿ ಮತ ಚಲಾಯಿಸಿದರು. ಕುಶಾಲನಗರ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಅವರು ಮತದಾನ ಮಾಡಿದರು. ಮತಗಟ್ಟೆ ಆವರಣದಲ್ಲಿ ಬಿಜೆಪಿ,ಕಾಂಗ್ರೆಸ್, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸಿದರು. ಮಾಜಿ ಸಚಿವ ಅಪ್ಪಚ್ಚುರಂಜನ್ ಪಾಲ್ಗೊಂಡು ಮತಯಾಚನೆ ಮಾಡಿದರು.