ಕುಶಾಲನಗರ, ಜೂ 07:ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ವೇಳೆ ಡಾ. ಧನಂಜಯ ಸರ್ಜಿ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಡಾ.ಧನಂಜಯ ಸರ್ಜಿ ಪತ್ನಿ ನಮಿತಾ ಸರ್ಜಿ, ಸೋದರ ಹರ್ಷ ಸರ್ಜಿ, ನಾಗವೇಣಿ ಸರ್ಜಿ ಮತ್ತಿತರರು ಹಾಜರಿದ್ದರು.
Back to top button
error: Content is protected !!