ಕ್ರೀಡೆ
ಜ್ಞಾನ ಕಾವೇರಿ ಕ್ಯಾಂಪಸ್: 2023-24ನೇ ಶೈಕ್ಷಣಿಕ ಸಾಲಿನ ಕ್ರೀಡೋತ್ಸವ
ಕುಶಾಲನಗರ, ಜೂ 08: ಪಠ್ಯದ ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳ್ಳುವುದಕ್ಕೆ ಕ್ರೀಡೆ ಪ್ರೇರಣೆಯನ್ನು ಒದಗಿಸುತ್ತದೆ ಎಂದು
ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಅವರು ಅಭಿಪ್ರಾಯಿಸಿದರು.
ಜ್ಞಾನ ಕಾವೇರಿ ಕ್ಯಾಂಪಸ್ ಚಿಕ್ಕ ಅಳುವಾರದಲ್ಲಿ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 2023-24ನೇ ಶೈಕ್ಷಣಿಕ ಸಾಲಿನ ಕ್ರೀಡೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸರ್ವೇ ಸಾಮಾನ್ಯ. ಸೋಲು ಗೆಲುವನ್ನು ಧನಾತ್ಮಕವಾಗಿ ತೆಗೆದುಕೊಂಡು ಜೀವನದ ಗುರಿ ತಲುಪುವ ಕಡೆಗೆ ಲಕ್ಷ್ಯ ಕೊಡಬೇಕು.
ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇರುವ ಉತ್ತಮ ವೇದಿಕೆ. ಪಠ್ಯೇತರ ಚಟುವಟಿಕೆಗಳಿಂದ ಯಾರೂ ಕೂಎಲಡ ವಂಚಿತರಾಗಬಾರದು. ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಹ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸೋಮವಾರಪೇಟೆ ಸೆಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಕರಾದ ಶಿವಕುಮಾರ್, ಜೋಡಿಗುಬ್ಬಿ ಶಾಲೆಯ ದೈಹಿಕ ಶಿಕ್ಷಕ ಅರುಣ್ ಕುಮಾರ್ ವಿವಿಧ ಕ್ರೀಡೆಗಳಿಗೆ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.
ಕ್ರೀಡಾ ಮಹೋತ್ಸವದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ. ಜ಼ಮೀರ್ ಅಹಮ್ಮದ್ ಮತ್ತು ಸುದರ್ಶನ್ ಅವರು ಕ್ರೀಡಾ ಕಾರ್ಯಕ್ರಮದ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು.