ಕುಶಾಲನಗರ ಜು 14: ಮುಳ್ಳುಸೋಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲದಿಂದ ನೋಟ್ ಪುಸ್ತಕಗಳನ್ನು ವಿತರಿಸುವ ಯೋಜನೆ ಮುಂದುವರೆದಿದೆ.
ಮೊದಲನೇ ಹಂತದಲ್ಲಿ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಎರಡನೇ ಹಂತದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಂದಿ ಬಸವನಹಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಚೆಲುವರಾಜು, ಉಪಾಧ್ಯಕ್ಷೆ ಜಯಮ್ಮ,ಸದಸ್ಯರಾದ ಜಿ.ಬಿ.ಜಗದೀಶ್, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.
Back to top button
error: Content is protected !!