ಕುಶಾಲನಗರ, ಜೂ 09; ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು “ಮಾದರಿ ಜನಪ್ರತಿನಿಧಿ” ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗಾಂಧಿ ಯುವಕ ಸಂಘದ ವತಿಯಿಂದ ಚಟ್ಟಳ್ಳಿಯ ಕಂಡಕೆರೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಬ ಕಾರ್ಯಕ್ರಮದಲ್ಲಿ ಕೆ.ಬಿ.ಶಂಶುದ್ಧೀನ್ ಅವರಿಗೆ ಮಾದರಿ ಜನಪ್ರತಿನಿಧಿ ಎಂಬ ಪ್ರಶಸ್ತಿಯನ್ನು ನೀಡಲಾಗಿದೆ. ಕೆ.ಬಿ.ಶಂಶುದ್ಧೀನ್ ಅವರು ಕಳೆದ ನಾಲ್ಕು ವರ್ಷಗಳಿಂದ ಮಾದರಿ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಬಡವರ ಸಂಕಷ್ಟಗಳಿಗೆ ಸ್ಪಂದಿಸಿ ಉತ್ತಮ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ ಎಂದು ಕೆ.ಬಿ.ಶಂಶುದ್ಧೀನ್ ಅವರಿಗೆ ಮಾದರಿ ಜನಪ್ರತಿನಿಧಿ ಪ್ರಶಸ್ತಿ ನೀಡಲಾಗಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕೆರೆ ತಿಳಿಸಿದ್ದಾರೆ.
Back to top button
error: Content is protected !!