ಮನವಿ

ಕುಶಾಲನಗರ – ಹಾರಂಗಿ ರಸ್ತೆಗೆ ಹಂಪ್ ಅಳವಡಿಸಲು‌ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

ಕುಶಾಲನಗರ,ಜೂ೧೨: ಕುಶಾಲನಗರ ಹಾಗೂ ಹಾರಂಗಿ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಂಪ್ ಅಳವಡಿಸುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕುಶಾಲನಗರ ತಾಲ್ಲೂಕು ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಕುಶಾಲನಗರ ಹಾರಂಗಿ ರಸ್ತೆಯಲ್ಲಿ ವಿಪರೀತವಾಗಿ ಅಪಘಾತಗಳು ಸಂಭವಿಸುತ್ತಿವೆ.‌ ಮೂಕಾಂಬಿಕ ಕಾಲೇಜು, ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಸ್ತೆಯಲ್ಲಿ ನಡೆದಾಡುತ್ತಾರೆ. ವಾಹನಗಳ ಅತಿವೇಗದಿಂದ ಸಾರ್ವಜನಿಕರು ರಸ್ತೆಯಲ್ಲಿ ಭಯದಿಂದ ಸಂಚರಿಸುವಂತಾಗಿದೆ.
ಕುಶಾಲನಗರ ಹಾರಂಗಿ ರಸ್ತೆಯು ಹೊಸದಾಗಿ ಡಾಂಬರೀಕರಣ ಹಾಗೂ ರಸ್ತೆ ಅಗಲೀಕರಣವಾಗಿರುವುದರಿಂದ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿರುತ್ತವೆ. ಹದಿನೈದು ದಿನಗಳ ಹಿಂದೆ ೨೨ ವರ್ಷದ ಯುವಕ‌ ಅಪಘಾತದಿಂದ ಸಾವನ್ನಪ್ಪಿದ್ದಾನೆ. ರಸ್ತೆಹುಬ್ಬು ಇಲ್ಲದ ಕಾರಣ ವಾಹನಗಳ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಪಂಚಾಯಿತಿಯಿಂದ ಪತೃ ವ್ಯವಹಾರ ನಡೆಸಲಾಗಿದ್ದು, ಯಾವುದೇ ಕ್ರಮ‌ಕೈಗೊಂಡಿರುವುದಿಲ್ಲ. ಆದ್ದರಿಂದ ತಾವುಗಳು
ಗಂಭೀರವಾದ ವಿಷಯವನ್ನು ಪರಿಗಣಿಸಿ, ಕುಶಾಲನಗರ ಹಾರಂಗಿ ರಸ್ತೆಯಲ್ಲಿ ರಸ್ತೆ ಹುಬ್ಬು ಅಳವಡಿಸಿ ಅಪಘಾತಗಳಿಗೆ ಕಡಿವಾಣ ಹಾಕುವಂತೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!