ಸಭೆ

ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕುಶಾಲನಗರ, ಆ 28: ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಹಾಜರಿದ್ದ ಸದಸ್ಯರಾದ ಕೆ.ವಿ.ಸಣ್ಣಪ್ಪ ಸೇರಿದಂತೆ ಹಲವು ಸದಸ್ಯರು ಸಂಘದ ಸದಸ್ಯರಿಗೆ ಸಾಲ ಸೌಲಭ್ಯಗಳ ಮೂಲಕ ಜಾನುವಾರುಗಳನ್ನು ಒದಗಿಸುವಂತೆ ಒತ್ತಾಯಿಸಿದರು. ಸಂಘದ ಸದಸ್ಯರು ಹೆಚ್ಚಿನ ‌ಮಂದಿ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಉತ್ತಮ ತಳಿಯ ಹಸುಗಳನ್ನು ಸಾಕುತ್ತಿರುವುದರಿಂದಾಗಿ ಅವುಗಳ ಚಿಕಿತ್ಸೆಗೆ ಸಕಾಲದಲ್ಲಿ ವೈದ್ಯರು ಲಭ್ಯವಾಗುತ್ತಿಲ್ಲ. ಇದರಿಂದ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಆರೋಪಿಸಿದರು.
ಸಂಘದ ವತಿಯಿಂದ ಪಶುವೈದ್ಯರನ್ನು ವಾರಕ್ಕೊಮ್ಮೆ ಕರೆಸಿ ಹಸುಗಳಿಗೆ ಚಿಕಿತ್ಸೆ ನೀಡಲು ಕ್ರಮವನ್ನು ತೆಗೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ಹಾಗೂ ಹಾಸನ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ಬಿ.ವಿ. ವೀಣಾ‌ ಅವರಲ್ಲಿ ಮನವಿ ಮಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆ.ಕೆ. ಹೇಮಂತ್ ಕುಮಾರ್ ಮಾತನಾಡಿ, ಹಾಲು ಉತ್ಪಾದಕ ರೈತರ ಅಭಿವೃದ್ಧಿಗೆ ಪೂರಕವಾದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಸಂಘವು ಈ ಸಾಲಿನಲ್ಲಿ ಎರಡು ಲಕ್ಷ ಲಾಭಾಂಶವನ್ನು ಗಳಿಸಿದೆ.
ಸದಸ್ಯರ ಬೇಡಿಕೆಗಳಿಗೆ ವ್ಯವಸ್ಥೆಗಳನ್ನು ಮಾಡಲಾಗುವುದು. ಹಸುಗಳ ಚಿಕಿತ್ಸೆಗೆ ಜಿಲ್ಲಾಮಟ್ಟದ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಆಡಳಿತ ಮಂಡಳಿಯ ಸಭೆಯನ್ನು ಕೂಡಿಗೆ ಡೈರಿಯಲ್ಲಿ ಹಮ್ಮಿಕೊಂಡು ಪಶುಗಳ ಚಿಕಿತ್ಸೆಗೆ ಸಂಬಂಧಿಸಿದ ಕಾರ್ಯಯೋಜನೆ ಕೈಗೊಳ್ಳಲು ಚರ್ಚಿಸಲಾಗುವುದು ಎಂದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ನರಸಮ್ಮ, ನಿರ್ದೇಶಕರಾದ ವಿಶ್ವೇಶರಯ್ಯ, ಕೆ.ಹೆಚ್.ಹರೀಶ್, ಕೆ. ಎ.ರವಿಕುಮಾರ್, ಪುನಿತ್ ಕುಮಾರ್, ಗೌತಮ್ ಕುಮಾರ್, ಅಣ್ಣಜೀನಾಯಕ್, ಜಯಮ್ಮ , ಸಂಘದ ಕಾರ್ಯದರ್ಶಿ ಎಂ.ಬಿಂದು ಸೇರಿದಂತೆ ಹಾಲು ಉತ್ಪಾದಕರ ಸಂಘದ ಸದಸ್ಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!