ಎಐಸಿಸಿ ಹಾಗೂ ಕೆಪಿಸಿಸಿ ಕಾರ್ಯ ಸೂಚಿಯಂತೆ ಭಾರತದ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಕಿಮಿ ಕಾಲ್ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡುವ ಕಾರ್ಯಕ್ರಮ ದಿನಾಂಕ 19 ರಂದು ಮಂಗಳವಾರ ಕುಶಾಲನಗರದ ಭಾರತ್ ಗ್ಯಾಸ್ ಕಛೇರಿ ಮುಂಭಾಗದ ಬಿ.ಜಿ.ಟಿ ಟವರ್ಸ್ ಫಂಕ್ಷನ್ ಹಾಲ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ಸಿನ ಕಾರ್ಯಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ಸಿನ ಉಸ್ತುವಾರಿಗಳಾದ ಕೆಪಿಸಿಸಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ್ ಕುಶಾಲನಗರ ಬ್ಲಾಕ್ ಕಾಂಗ್ರೆಸ್ಸಿನ ಉಸ್ತುವಾರಿಗಳಾದ ಪ್ರದೀಪ್ ರೈ ಪಾಂಬಾರು, ಜಿಲ್ಲೆಯ ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಶಾಸಕರುಗಳು, ಜಿಲ್ಲಾ ಕಾಂಗ್ರೆಸ್ಸಿನ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವಲಯ ಕಾಂಗ್ರೆಸ್ಸಿನ ಅಧ್ಯಕ್ಷರುಗಳು, ಬೂತಿನ ಅಧ್ಯಕ್ಷರುಗಳು, ಪಕ್ಷದ ಹಿರಿಯ ಕಿರಿಯ ಮುಖಂಡರುಗಳು, ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬಿ.ಎಸ್. ಅನಂತ್ ಕುಮಾರ್ ಕೋರಿದ್ದಾರೆ.
Back to top button
error: Content is protected !!