ಕುಶಾಲನಗರ ಜೂ.10: ಕುಶಾಲನಗರದ ರಥ ಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕ ಜಯಂತಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ 5 ಗಂಟೆಗೆ ಗಣಪತಿ ಹೋಮ, ಧ್ವಜಾರೋಹಣ, ನಂತರ ಕಾವೇರಿ ನದಿಯಿಂದ ಕಳಸ ಹೊತ್ತ ಮಹಿಳೆಯರು ಮುಖ್ಯ ಬೀದಿಗಳಲ್ಲಿ ಜಾನಪದ ವೀರಗಾಸೆ, ನೃತ್ಯ ಮತ್ತು ಮಂಗಳ ವಾದ್ಯದೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಸ್ಥಾನ ತಲುಪಿದರು.
Back to top button
error: Content is protected !!