ಕೂಡಿಗೆ. ಜೂ. 29: ಕೂಡಿಗೆಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕ್ರೀಡಾ ಶಾಲೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಸದಸ್ಯ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಪ್ರಥಮವಾಗಿ 40 ವರ್ಷಗಳ ಹಿಂದೆ ಆರಂಭಗೊಂಡಿದ್ದ ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಗೆ ಇದೀಗ ಕ್ರೀಡಾ ಶಾಲೆಯ ದುರಸ್ತಿಗೆ ಸೇರಿದಂತೆ ಅದರ ಅಭಿವೃದ್ಧಿಗೆ ಇಲಾಖೆಯ ವತಿಯಿಂದ ಬಿಡುಗಡೆಯಾದ ಹಣದಲ್ಲಿ ಕಾಮಗಾರಿಯು ನಡೆಯುತ್ತಿರುವ ಸ್ಧಳದ ವೀಕ್ಷಣೆ ಮಾಡಿದರು.
ನಂತರ ಕೆಲವು ಮಕ್ಕಳೊಂದಿಗೆ ಶಾಲೆಯಲ್ಲಿರುವ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಪಡೆದು, ವಿದ್ಯಾರ್ಥಿ ನಿಲಯದಲ್ಲಿ ಅಳವಡಿಸಿರುವ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿರುವುದನ್ನು ಕೊಡಲೇ ಸರಿಪಡಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದರು.ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ, ಮಲೇರಿಯಾ, ಕಾಯಿಲೆಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಪಟ್ಟ ಅಧಿಕಾರಿ ವರ್ಗದವರು ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಫಿಲೋಮೀನಾ ಚಾರ್ಜ್, ಅಭಿವೃದ್ಧಿ ಅಧಿಕಾರಿ ಸಂತೋಷ್, ಅವಿನಾಶ್, ಶಾಲಾ ಮುಖ್ಯೋಪಾಧ್ಯಾಯ ದೇವ್ ಕುಮಾರ್, ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
Back to top button
error: Content is protected !!